ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಯೆಹೋವನು ಕುಗ್ಗಿದವರನ್ನು ರಕ್ಷಿಸಬೇಕೆಂದು ಬೇಡಿಕೊಳ್ಳುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ } [QS]ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? [QE][QS]ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ? [QE]
2. [QS]ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; [QE][QS]ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ. [QE]
3. [QS]ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; [QE][QS][* ಅಥವಾ ದುಷ್ಟನು ಲಾಭಬಡುಕನನ್ನು ಹರಸುತ್ತಾನೆ. ]ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ. [QE]
4. [QS]ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನನ್ನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, [QE][QS]ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ. [QE]
5. [QS]ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; [QE][QS]ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ [QE][QS]ಅದು ಅವನ ಗ್ರಹಿಕೆಗೆ ಬರುವುದಿಲ್ಲ; [QE][QS]ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ. [QE]
6. [QS]ಅವನು, “ನಾನು ಕದಲುವುದೇ ಇಲ್ಲ; [QE][QS]ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ. [QE]
7. [QS]ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; [QE][QS]ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ. [QE]
8. [QS]ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, [QE][QS]ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. [QE][QS]ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ. [QE]
9. [QS]ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. [QE][QS]ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ. [QE]
10. [QS]ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, [QE][QS]ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ. [QE]
11. [QS]ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; [QE][QS]ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ. [QE]
12. [QS]ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; [QE][QS]ಅವನನ್ನು ರಕ್ಷಿಸುವುದಕ್ಕೆ ಕೈಚಾಚು. [QE]
13. [QS]“ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, [QE][QS]ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು? [QE]
14. [QS]ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; [QE][QS]ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; [QE][QS]ದಿಕ್ಕಿಲ್ಲದವನಿಗೆ ನೀನೇ ದಿಕ್ಕು. [QE]
15. [QS]ದುಷ್ಟನ ಭುಜಬಲವನ್ನು ಮುರಿದುಹಾಕು, [QE][QS]ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು. [QE]
16. [QS]ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; [QE][QS]ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು. [QE]
17. [QS]ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; [QE][QS]ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ. [QE]
18. [QS]ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. [QE][QS]ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 10 / 150
ಯೆಹೋವನು ಕುಗ್ಗಿದವರನ್ನು ರಕ್ಷಿಸಬೇಕೆಂದು ಬೇಡಿಕೊಳ್ಳುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ 1 ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ? 2 ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ. 3 ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; * ಅಥವಾ ದುಷ್ಟನು ಲಾಭಬಡುಕನನ್ನು ಹರಸುತ್ತಾನೆ. ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ. 4 ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನನ್ನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ. 5 ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ. 6 ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ. 7 ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ. 8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ. 9 ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ. 10 ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ. 11 ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ. 12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು. 13 “ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು? 14 ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು. 15 ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು. 16 ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು. 17 ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ. 18 ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 10 / 150
×

Alert

×

Kannada Letters Keypad References