ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; [QBR] ಯೆಹೋವನೇ, ನಿನ್ನನ್ನು ಕೊಂಡಾಡುವೆನು. [QBR]
2. ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; [QBR] ನನಗೆ ಯಾವಾಗ ದರ್ಶನಕೊಡುವಿ? [QBR] ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. [QBR]
3. ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; [QBR] ದುರಾಚಾರವನ್ನು ಹಗೆಮಾಡುತ್ತೇನೆ, [QBR] ಅದರ ಗೊಡವೆಯೇ ನನಗೆ ಬೇಡ. [QBR]
4. ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; [QBR] ಕೆಟ್ಟತನವನ್ನು ಅರಿಯದಿರುವೆನು. [QBR]
5. ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; [QBR] ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. [QBR]
6. ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; [QBR] ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, [QBR] ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು. [QBR]
7. ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; [QBR] ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. [QBR]
8. ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, [QBR] ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು. [PE]

Notes

No Verse Added

Total 150 Chapters, Current Chapter 101 of Total Chapters 150
ಕೀರ್ತನೆಗಳು 101:124
1. ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;
ಯೆಹೋವನೇ, ನಿನ್ನನ್ನು ಕೊಂಡಾಡುವೆನು.
2. ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು;
ನನಗೆ ಯಾವಾಗ ದರ್ಶನಕೊಡುವಿ?
ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
3. ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ;
ದುರಾಚಾರವನ್ನು ಹಗೆಮಾಡುತ್ತೇನೆ,
ಅದರ ಗೊಡವೆಯೇ ನನಗೆ ಬೇಡ.
4. ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ;
ಕೆಟ್ಟತನವನ್ನು ಅರಿಯದಿರುವೆನು.
5. ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು;
ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
6. ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;
ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು,
ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
7. ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು;
ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
8. ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,
ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು. PE
Total 150 Chapters, Current Chapter 101 of Total Chapters 150
×

Alert

×

kannada Letters Keypad References