ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; [QBR] ಯೆಹೋವನೇ, ನಿನ್ನನ್ನು ಕೊಂಡಾಡುವೆನು. [QBR]
2. ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; [QBR] ನನಗೆ ಯಾವಾಗ ದರ್ಶನಕೊಡುವಿ? [QBR] ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. [QBR]
3. ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; [QBR] ದುರಾಚಾರವನ್ನು ಹಗೆಮಾಡುತ್ತೇನೆ, [QBR] ಅದರ ಗೊಡವೆಯೇ ನನಗೆ ಬೇಡ. [QBR]
4. ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; [QBR] ಕೆಟ್ಟತನವನ್ನು ಅರಿಯದಿರುವೆನು. [QBR]
5. ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; [QBR] ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. [QBR]
6. ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; [QBR] ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, [QBR] ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು. [QBR]
7. ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; [QBR] ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. [QBR]
8. ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, [QBR] ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 101 / 150
ಕೀರ್ತನೆಗಳು 101:126
1 ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು. 2 ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. 3 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ. 4 ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು. 5 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. 6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು. 7 ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. 8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 101 / 150
Common Bible Languages
West Indian Languages
×

Alert

×

kannada Letters Keypad References