ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ರಾಜಶ್ರೇಷ್ಠನ ಪ್ರತಿಜ್ಞೆ }[PS]*ದಾವೀದನ ಕೀರ್ತನೆ. [BR]ಕೀರ್ತ 15; 24 *[PE][QS]ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; [QE][QS]ಯೆಹೋವನೇ, ನಿನ್ನನ್ನು ಕೊಂಡಾಡುವೆನು. [QE]
2. [QS]ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; [QE][QS]ನನಗೆ ಯಾವಾಗ ದರ್ಶನಕೊಡುವಿ? [QE][QS]ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. [QE]
3. [QS]ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; [QE][QS]ದುರಾಚಾರವನ್ನು ಹಗೆಮಾಡುತ್ತೇನೆ, [QE][QS]ಅದರ ಗೊಡವೆಯೇ ನನಗೆ ಬೇಡ. [QE]
4. [QS]ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; [QE][QS]ಕೆಟ್ಟತನವನ್ನು ಅರಿಯದಿರುವೆನು. [QE]
5. [QS]ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; [QE][QS]ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. [QE]
6. [QS]ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; [QE][QS]ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, [QE][QS]ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು. [QE]
7. [QS]ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; [QE][QS]ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. [QE]
8. [QS]ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, [QE][QS]ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 101 / 150
ರಾಜಶ್ರೇಷ್ಠನ ಪ್ರತಿಜ್ಞೆ 3 *ದಾವೀದನ ಕೀರ್ತನೆ.
ಕೀರ್ತ 15; 24 *
ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು. 2 ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. 3 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ. 4 ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು. 5 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. 6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು. 7 ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. 8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 101 / 150
×

Alert

×

Kannada Letters Keypad References