1. {#3ದುಃಖಿತನಾದ ದೀನನ ಪ್ರಾರ್ಥನೆ } [QS]ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು; [QE][QS]ನನ್ನ ಕೂಗು ನಿನಗೆ ಮುಟ್ಟಲಿ. [QE]
2. [QS]ನನ್ನ ಕಷ್ಟದಲ್ಲಿ ವಿಮುಖನಾಗಬೇಡ; [QE][QS]ನನ್ನ ಮೊರೆಗೆ ಕಿವಿಗೊಡು; [QE][QS]ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು. [QE]
3. [QS]ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; [QE][QS]ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ. [QE]
4. [QS]ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; [QE][QS]ಊಟವನ್ನು ಮರೆತೆನು. [QE]
5. [QS]ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ. [QE]
6. [QS]ಅಡವಿಯ ಬಕಪಕ್ಷಿಯಂತಿದ್ದೇನೆ;[* ಬಕಪಕ್ಷಿ; ಅಥವಾ ರಣಹದ್ದು. ] [QE][QS]ಹಾಳೂರಿನ ಗೂಬೆಯಂತಿದ್ದೇನೆ. [QE]
7. [QS]ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ, [QE][QS]ಒಂಟಿಯಾದ ಪಕ್ಷಿಯಂತಿದ್ದೇನೆ. [QE]
8. [QS]ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; [QE][QS]ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ, [QE][QS]ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ. [QE]
9. [QS]ಬೂದಿಯೇ ನನಗೆ ಆಹಾರವಾಯಿತು; [QE][QS]ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು. [QE]
10. [QS]ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ, [QE][QS]ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ! [QE]
11. [QS]ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; [QE][QS]ನಾನು ಬಾಡಿಹೋದ ಹುಲ್ಲಿನಂತಿದ್ದೇನೆ. [QE]
12. [QS]ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; [QE][QS]ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು. [QE]
13. [QS]ನೀನು ಎದ್ದು ಚೀಯೋನನ್ನು ಕರುಣಿಸುವಿ. [QE][QS]ಅದಕ್ಕೆ ಕೃಪೆತೋರಿಸುವ ಸಮಯ ಇದೇ; [QE][QS]ನಿಯಮಿತ ಕಾಲವು ಬಂದಿದೆ. [QE]
14. [QS]ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, [QE][QS]ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; [QE][QS]ಅದರ ಧೂಳಿಗೆ ಅವರು ಮರಗುತ್ತಾರೆ. [QE]
15. [QS]ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ, [QE]
16. [QS]ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ, [QE]
17. [QS]ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, [QE][QS]ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು. [QE]
18. [QS]ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, [QE][QS]ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ, [QE]
19. [QS]“ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; [QE][QS]ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ. [QE]
20. [QS]ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ, [QE]
21. [QS]ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, [QE][QS]ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ. [QE]
22. [QS]ಜನಾಂಗಗಳೂ, ರಾಜ್ಯಗಳೂ ಕೂಡಿಬಂದು [QE][QS]ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು. [QE]
23. [QS]ಆತನು ಯೌವನಪ್ರಾಯದಲ್ಲಿಯೇ[† ಯೌವನಪ್ರಾಯದಲ್ಲಿಯೇ ಅಥವಾ ದಾರಿಯಲ್ಲಿಯೇ. ] ನನ್ನ ಬಲವನ್ನು ಕುಂದಿಸಿದ್ದಾನೆ; [QE]
24. [QS]ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. [QE][QS]ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; [QE][QS]ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ. [QE]
25. [QS]ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; [QE][QS]ಗಗನಮಂಡಲವು ನಿನ್ನ ಕೈಕೆಲಸವಾಗಿದೆ. [QE]
26. [QS]ಅವು ನಾಶವಾಗುವವು; [QE][QS]ಆದರೆ ನೀನು ಶಾಶ್ವತವಾಗಿರುತ್ತಿ. [QE][QS]ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. [QE][QS]ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು. [QE]
27. [QS]ನೀನಾದರೋ ಏಕರೀತಿಯಾಗಿರುತ್ತಿ; [QE][QS]ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ. [QE]
28. [QS]ನಿನ್ನ ಸೇವಕರ ಮಕ್ಕಳು ಬಾಳುವರು. [QE][QS]ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ. [QE]