3. {#3ದೇವರ ಕೃಪೆಯನ್ನು ಕೊಂಡಾಡುವುದು }[PS]*ದಾವೀದನ ಕೀರ್ತನೆ. *[PE][QS]ನನ್ನ ಮನವೇ, ಯೆಹೋವನನ್ನು ಕೊಂಡಾಡು; [QE][QS]ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. [QE]
2. [QS]ನನ್ನ ಮನವೇ, ಯೆಹೋವನನ್ನು ಕೊಂಡಾಡು; [QE][QS]ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. [QE]
3. [QS]ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, [QE][QS]ಸಮಸ್ತ ರೋಗಗಳನ್ನು ವಾಸಿಮಾಡುವವನೂ, [QE]
4. [QS]ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, [QE][QS][* ಅಥವಾ ಆತನು ನಿನ್ನನ್ನು ಶಾಶ್ವತ ಪ್ರೀತಿಯಿಂದ ಮತ್ತು ಕೃಪೆಯಿಂದ ಆಶೀರ್ವದಿಸುತ್ತಾನೆ. ]ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. [QE]
5. [QS]ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; [QE][QS]ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ. [QE]
6. [QS]ಯೆಹೋವನು ನೀತಿಯನ್ನು ಸಾಧಿಸುವವನಾಗಿ, [QE][QS]ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ. [QE]
7. [QS]ಆತನು ಮೋಶೆಗೆ ತನ್ನ ಮಾರ್ಗವನ್ನೂ, [QE][QS]ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು. [QE]
8. [QS]ಯೆಹೋವನು ಕನಿಕರವೂ, ದಯೆಯೂ, [QE][QS]ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು. [QE]
9. [QS]ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; [QE][QS]ನಿತ್ಯವೂ ಕೋಪಿಸುವವನಲ್ಲ. [QE]
10. [QS]ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; [QE][QS]ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. [QE]
11. [QS]ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, [QE][QS]ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. [QE]
12. [QS]ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, [QE][QS]ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ. [QE]
13. [QS]ತಂದೆಯು ಮಕ್ಕಳನ್ನು ಕನಿಕರಿಸುವಂತೆ, [QE][QS]ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. [QE]
14. [QS]ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; [QE][QS]ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ. [QE]
15. [QS]ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; [QE][QS]ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ. [QE]
16. [QS]ಗಾಳಿ ಬಡಿಯುತ್ತಲೇ ಅದು ಹೋಗುವುದು; [QE][QS]ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ. [QE]
17. [QS]ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, [QE][QS]ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ. [QE]
18. [QS]ಆತನ ನಿಬಂಧನೆಗಳನ್ನು ಕೈಕೊಂಡು, [QE][QS]ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ [QE][QS]ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು. [QE]
19. [QS]ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; [QE][QS]ಆತನು ಸಮಸ್ತವನ್ನೂ ಆಳುತ್ತಾನೆ. [QE]
20. [QS]ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ [QE][QS]ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, [QE][QS]ಯೆಹೋವನನ್ನು ಕೊಂಡಾಡಿರಿ. [QE]
21. [QS]ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, [QE][QS]ಯೆಹೋವನನ್ನು ಕೊಂಡಾಡಿರಿ. [QE]
22. [QS]ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, [QE][QS]ಯೆಹೋವನನ್ನು ಕೊಂಡಾಡಿರಿ. [QE][QS]ನನ್ನ ಮನವೇ, ಯೆಹೋವನನ್ನು ಕೊಂಡಾಡು. [QE]