1. {#3ಯೆಹೋವನ ಸೃಷ್ಟಿಯ ಮಹತ್ವ [BR]ಆದಿ 1 } [QS]ನನ್ನ ಮನವೇ, ಯೆಹೋವನನ್ನು ಕೊಂಡಾಡು. [QE][QS]ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; [QE][QS]ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ. [QE]
2. [QS]ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; [QE][QS]ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ. [QE]
3. [QS]ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; [QE][QS]ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; [QE][QS]ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ. [QE]
4. [QS] [* ಅಥವಾ ಆತನು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿ ಮಾಡಿಕೊಳ್ಳುತ್ತಾನೆ. ]ಗಾಳಿಯನ್ನು ನಿನ್ನ ದೂತರನ್ನಾಗಿಯೂ, [QE][QS]ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ. [QE]
5. [QS]ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ [QE][QS]ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ. [QE]
6. [QS]ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; [QE][QS]ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು. [QE]
7. [QS]ನೀನು ಗದರಿಸಲು ಅದು ಓಡಿಹೋಯಿತು; [QE][QS]ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು, [QE]
8. [QS]ಪರ್ವತಗಳು ಎದ್ದವು; ತಗ್ಗುಗಳು ಇಳಿದವು. [QE]
9. [QS]ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, [QE][QS]ನೀನು ಮೇರೆಗಳನ್ನು ಗೊತ್ತುಮಾಡಿದಿ. [QE]
10. [QS]ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; [QE][QS]ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ. [QE]
11. [QS]ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; [QE][QS]ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ. [QE]
12. [QS]ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. [QE]
13. [QS]ನೀನು ನಿನ್ನ ಮೇಲಂತಸ್ತುಗಳಿಂದ[† ಮೇಲಂತಸ್ತುಗಳಿಂದ ಅಥವಾ ಆಕಾಶದಿಂದ. ] ಪರ್ವತಗಳಿಗೆ ನೀರು ಕೊಡುತ್ತೀ; [QE][QS]ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ. [QE]
14. [QS]ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; [QE][QS]ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. [QE][QS]ಅವರು ಭೂವ್ಯವಸಾಯಮಾಡಿ ಆಹಾರವನ್ನು, [QE]
15. [QS]ಹೃದಯಾನಂದಕರವಾದ ದ್ರಾಕ್ಷಾರಸವನ್ನು, [QE][QS]ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, [QE][QS]ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ. [QE]
16. [QS]ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ [QE][QS]ಬೇಕಾದಷ್ಟು ಜಲವಿರುತ್ತದೆ. [QE]
17. [QS]ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; [QE][QS]ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ. [QE]
18. [QS]ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, [QE][QS]ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ. [QE]
19. [QS]ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; [QE][QS]ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು. [QE]
20. [QS]ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. [QE][QS]ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ. [QE]
21. [QS]ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; [QE][QS]ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ. [QE]
22. [QS]ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. [QE]
23. [QS]ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; [QE][QS]ಸಾಯಂಕಾಲದವರೆಗೆ ದುಡಿಯುತ್ತಾನೆ. [QE]
24. [QS]ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. [QE][QS]ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; [QE][QS]ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ. [QE]
25. [QS]ಇಗೋ, ಬಹುವಿಶಾಲವಾದ ಸಮುದ್ರವು! [QE][QS]ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ. [QE]
26. [QS]ಅದರಲ್ಲಿ ಹಡಗುಗಳು ಸಂಚರಿಸುತ್ತವೆ [QE][QS]ನೀನು ಉಂಟುಮಾಡಿದ [‡ ಕೀರ್ತನೇ. 74:14 ಅನ್ನು ನೋಡಿರಿ ]ಲಿವ್ಯಾತಾನವು ಅದರಲ್ಲಿ ಆಡುತ್ತದೆ. [QE]
27. [QS]ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ. [QE]
28. [QS]ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; [QE][QS]ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ. [QE]
29. [QS]ನೀನು ವಿಮುಖನಾಗಲು ತಲ್ಲಣಿಸುತ್ತವೆ; [QE][QS]ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ. [QE]
30. [QS]ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. [QE][QS]ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ. [QE]
31. [QS]ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; [QE][QS]ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ. [QE]
32. [QS]ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; [QE][QS]ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ. [QE]
33. [QS]ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; [QE][QS]ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು. [QE]
34. [QS]ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; [QE][QS]ನಾನಾದರೋ ಯೆಹೋವನಲ್ಲಿ ಆನಂದಿಸುವೆನು. [QE]
35. [QS]ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; [QE][QS]ದುಷ್ಟರು ನಿರ್ಮೂಲವಾಗಲಿ. [QE][QS]ನನ್ನ ಮನವೇ, ಯೆಹೋವನನ್ನು ಕೊಂಡಾಡು; [QE][QS]ಯೆಹೋವನಿಗೆ ಸ್ತೋತ್ರ. [QE]