1. ನನ್ನ ಮನವೇ, ಯೆಹೋವನನ್ನು ಕೊಂಡಾಡು. [QBR] ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; [QBR] ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ. [QBR]
2. ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; [QBR] ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ. [QBR]
3. ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; [QBR] ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; [QBR] ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ. [QBR]
4. [* ಅಥವಾ ಆತನು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿ ಮಾಡಿಕೊಳ್ಳುತ್ತಾನೆ.] ಗಾಳಿಯನ್ನು ನಿನ್ನ ದೂತರನ್ನಾಗಿಯೂ, [QBR] ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ. [QBR]
5. ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ [QBR] ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ. [QBR]
6. ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; [QBR] ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು. [QBR]
7. ನೀನು ಗದರಿಸಲು ಅದು ಓಡಿಹೋಯಿತು; [QBR] ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು, [QBR]
8. ಪರ್ವತಗಳು ಎದ್ದವು; ತಗ್ಗುಗಳು ಇಳಿದವು. [QBR]
9. ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, [QBR] ನೀನು ಮೇರೆಗಳನ್ನು ಗೊತ್ತುಮಾಡಿದಿ. [QBR]
10. ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; [QBR] ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ. [QBR]
11. ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; [QBR] ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ. [QBR]
12. ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. [QBR]
13. ನೀನು ನಿನ್ನ ಮೇಲಂತಸ್ತುಗಳಿಂದ [† ಮೇಲಂತಸ್ತುಗಳಿಂದ ಅಥವಾ ಆಕಾಶದಿಂದ. ] ಪರ್ವತಗಳಿಗೆ ನೀರು ಕೊಡುತ್ತೀ; [QBR] ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ. [QBR]
14. ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; [QBR] ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. [QBR] ಅವರು ಭೂವ್ಯವಸಾಯಮಾಡಿ ಆಹಾರವನ್ನು, [QBR]
15. ಹೃದಯಾನಂದಕರವಾದ ದ್ರಾಕ್ಷಾರಸವನ್ನು, [QBR] ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, [QBR] ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ. [QBR]
16. ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ [QBR] ಬೇಕಾದಷ್ಟು ಜಲವಿರುತ್ತದೆ. [QBR]
17. ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; [QBR] ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ. [QBR]
18. ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, [QBR] ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ. [QBR]
19. ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; [QBR] ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು. [QBR]
20. ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. [QBR] ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ. [QBR]
21. ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; [QBR] ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ. [QBR]
22. ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. [QBR]
23. ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; [QBR] ಸಾಯಂಕಾಲದವರೆಗೆ ದುಡಿಯುತ್ತಾನೆ. [QBR]
24. ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. [QBR] ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; [QBR] ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ. [QBR]
25. ಇಗೋ, ಬಹುವಿಶಾಲವಾದ ಸಮುದ್ರವು! [QBR] ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ. [QBR]
26. ಅದರಲ್ಲಿ ಹಡಗುಗಳು ಸಂಚರಿಸುತ್ತವೆ [QBR] ನೀನು ಉಂಟುಮಾಡಿದ [‡ ಕೀರ್ತನೇ. 74:14 ಅನ್ನು ನೋಡಿರಿ] ಲಿವ್ಯಾತಾನವು ಅದರಲ್ಲಿ ಆಡುತ್ತದೆ. [QBR]
27. ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ. [QBR]
28. ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; [QBR] ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ. [QBR]
29. ನೀನು ವಿಮುಖನಾಗಲು ತಲ್ಲಣಿಸುತ್ತವೆ; [QBR] ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ. [QBR]
30. ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. [QBR] ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ. [QBR]
31. ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; [QBR] ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ. [QBR]
32. ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; [QBR] ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ. [QBR]
33. ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; [QBR] ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು. [QBR]
34. ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; [QBR] ನಾನಾದರೋ ಯೆಹೋವನಲ್ಲಿ ಆನಂದಿಸುವೆನು. [QBR]
35. ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; [QBR] ದುಷ್ಟರು ನಿರ್ಮೂಲವಾಗಲಿ. [QBR] ನನ್ನ ಮನವೇ, ಯೆಹೋವನನ್ನು ಕೊಂಡಾಡು; [QBR] ಯೆಹೋವನಿಗೆ ಸ್ತೋತ್ರ. [PE]