1. ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; [QBR] ಆತನ ನಾಮದ ಮಹತ್ವವನ್ನು ವರ್ಣಿಸಿರಿ; [QBR] ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ. [QBR]
2. ಆತನನ್ನು ಕೀರ್ತಿಸಿರಿ, ಭಜಿಸಿರಿ; [QBR] ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. [QBR]
3. ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; [QBR] ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. [QBR]
4. ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; [QBR] ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. [QBR]
5. ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, [QBR] ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು, [QBR]
6. ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, [QBR] ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. [QBR]
7. ಯೆಹೋವನೆಂಬಾತನೇ ನಮ್ಮ ದೇವರು; [QBR] ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. [QBR]
8. ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, [QBR] ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. [QBR]
9. ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; [QBR] ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು. [QBR]
10. ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು. [QBR]
11. ಅವರಲ್ಲಿ ಸ್ವಲ್ಪ ಜನರು [QBR] ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ, [QBR]
12. ಆತನು, “ನಿಮಗೆ ಈ ದೇಶವನ್ನು ಕೊಡುವೆನು; [QBR] ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು” ಎಂದು ಹೇಳಿದನು. [QBR]
13. ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ, [QBR]
14. ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. [QBR] ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ, [QBR]
15. “ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, [QBR] ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು. [QBR]
16. ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, [QBR] [* ಅಥವಾ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು. ] ಆಹಾರವನ್ನು ನಾಶಮಾಡಿಬಿಟ್ಟನು. [QBR]
17. ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; [QBR] ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. [QBR]
18. ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; [QBR] ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು. [QBR]
19. ಅವನು ತನ್ನ ಮಾತು ನೆರವೇರುವ ತನಕ [QBR] ಯೆಹೋವನ ವಾಕ್ಯದಿಂದ ಶೋಧಿತನಾದನು. [QBR]
20. ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; [QBR] ಜನಾಧಿಪತಿಯು ಅವನನ್ನು ಬಿಡಿಸಿದನು. [QBR]
21. ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, [QBR] ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು. [QBR]
22. ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ, [QBR] ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು. [QBR]
23. ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; [QBR] ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು. [QBR]
24. ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, [QBR] ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು. [QBR]
25. ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, [QBR] ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು. [QBR]
26. ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, [QBR] ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು. [QBR]
27. ಅವರು ಹಾಮನ ದೇಶದವರ ಮಧ್ಯದಲ್ಲಿ, [QBR] ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು. [QBR]
28. ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. [QBR] ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ. [QBR]
29. ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು. [QBR]
30. ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; [QBR] ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು. [QBR]
31. ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, [QBR] ವಿಷದ ಹುಳಗಳೂ, ಹೇನುಗಳೂ ಉಂಟಾದವು. [QBR]
32. ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ, [QBR]
33. ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ, [QBR] ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು. [QBR]
34. ಆತನು ಆಜ್ಞಾಪಿಸಲು ಮಿಡತೆಗಳೂ, [QBR] ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು, [QBR]
35. ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, [QBR] ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು. [QBR]
36. ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, [QBR] ಚೊಚ್ಚಲ ಮಕ್ಕಳನ್ನು ಸಂಹರಿಸಿದನು. [QBR]
37. ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; [QBR] ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ. [QBR]
38. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, [QBR] ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು. [QBR]
39. ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, [QBR] ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು. [QBR]
40. ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; [QBR] ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು. [QBR]
41. ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು, [QBR] ಅರಣ್ಯದಲ್ಲಿ ನದಿಯಾಗಿ ಹರಿಯಿತು. [QBR]
42. ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, [QBR] ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು [QBR]
43. ತನ್ನ ಪ್ರಜೆಯು ಉಲ್ಲಾಸದಿಂದಲೂ, [QBR] ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು. [QBR]
44. ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; [QBR] ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು. [QBR]
45. ಅವರು ತನ್ನ ವಿಧಿಗಳನ್ನು ಕೈಕೊಂಡು, [QBR] ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. [QBR] ಯೆಹೋವನಿಗೆ ಸ್ತೋತ್ರ! [PE]