1. {#3ಯೆಹೋವನ ಕ್ಷಮಾಯಾಚನೆ [BR]ಕೀರ್ತ 78; 105 } [QS]ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. [QE][QS]ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು. [QE]
2. [QS]ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? [QE][QS]ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು? [QE]
3. [QS]ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, [QE][QS]ನೀತಿಯನ್ನು ಪಾಲಿಸುವವರೂ ಧನ್ಯರು. [QE]
4. [QS]ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, [QE][QS]ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. [QE][QS]ನನ್ನನ್ನು ರಕ್ಷಿಸಲಿಕ್ಕೆ ಬಾ, [QE]
5. [QS]ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, [QE][QS]ನಾನೂ ಅವರೊಂದಿಗೆ ಸಂತೋಷಿಸುವೆನು; [QE][QS]ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು. [QE]
6. [QS]ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; [QE][QS]ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು. [QE]
7. [QS]ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; [QE][QS]ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. [QE][QS]ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು. [QE]
8. [QS]ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, [QE][QS]ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು. [QE]
9. [QS]ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; [QE][QS]ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು. [QE]
10. [QS]ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; [QE][QS]ವೈರಿಯ ಹಸ್ತದಿಂದ ಬಿಡಿಸಿದನು. [QE]
11. [QS]ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; [QE][QS]ಒಬ್ಬನೂ ಉಳಿಯಲಿಲ್ಲ. [QE]
12. [QS]ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು. [QE]
13. [QS]ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, [QE][QS]ಆತನ ನಡೆಸುವಿಕೆಗೆ ಕಾದಿರದೆ, [QE]
14. [QS]ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, [QE][QS]ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು. [QE]
15. [QS]ಆತನು ಅವರ ಆಶೆಯನ್ನು ಪೂರೈಸಿದರೂ, [QE][QS]ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು. [QE]
16. [QS]ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, [QE][QS]ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು, [QE]
17. [QS]ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; [QE][QS]ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು. [QE]
18. [QS]ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; [QE][QS]ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು. [QE]
19. [QS]ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, [QE][QS]ಅದಕ್ಕೆ ಅಡ್ಡಬಿದ್ದರು. [QE]
20. [QS]ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, [QE][QS]ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು. [QE]
21. [QS]ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ, [QE]
22. [QS]ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, [QE][QS]ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು. [QE]
23. [QS]ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, [QE][QS]ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, [QE][QS]ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು. [QE]
24. [QS]ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, [QE][QS]ಆತನ ಮಾತನ್ನು ನಂಬಲಿಲ್ಲ. [QE]
25. [QS]ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, [QE][QS]ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. [QE]
26. [QS]ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ, [QE]
27. [QS]ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, [QE][QS]ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು. [QE]
28. [QS]ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, [QE][QS]ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು. [QE]
29. [QS]ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; [QE][QS]ಅವರಲ್ಲಿ ವ್ಯಾಧಿಯುಂಟಾಯಿತು. [QE]
30. [QS]ಫೀನೆಹಾಸನು ಎದ್ದು ಅವರನ್ನು ದಂಡಿಸಲು, [QE][QS]ಆ ವ್ಯಾಧಿಯು ನಿಂತುಹೋಯಿತು. [QE]
31. [QS]ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು. [QE]
32. [QS]ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. [QE][QS]ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು. [QE]
33. [QS]ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, [QE][QS]ಮೋಶೆ ದುಡುಕಿ ಮಾತನಾಡಿದನು. [QE]
34. [QS]ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, [QE][QS]ಯೆಹೋವನ ಆಜ್ಞೆಗೆ ಅವಿಧೇಯರಾಗಿ, [QE]
35. [QS]ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು. [QE]
36. [QS]ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು. [QE]
37. [QS]ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. [QE]
38. [QS]ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, [QE][QS]ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; [QE][QS]ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು. [QE]
39. [QS]ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. [QE][QS]ದುರಾಚಾರಗಳಿಂದ ದೇವದ್ರೋಹಿಗಳಾದರು. [QE]
40. [QS]ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; [QE][QS]ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ, [QE]
41. [QS]ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. [QE][QS]ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು; [QE]
42. [QS]ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು. [QE]
43. [QS]ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, [QE][QS]ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; [QE][QS]ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು. [QE]
44. [QS]ಆದರೆ ಆತನು ಕಷ್ಟದಲ್ಲಿದ್ದ, [QE][QS]ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು. [QE]
45. [QS]ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, [QE][QS]ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು. [QE]
46. [QS]ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು. [QE]
47. [QS]ಯೆಹೋವನೇ, ನಮ್ಮ ದೇವರೇ, ರಕ್ಷಿಸು; [QE][QS]ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. [QE][QS]ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; [QE][QS]ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು. [QE]
48. [QS]ಇಸ್ರಾಯೇಲ್ ದೇವರಾದ ಯೆಹೋವನಿಗೆ, [QE][QS]ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; [QE][QS]ಸರ್ವಜನರೂ “ಆಮೆನ್” ಎನ್ನಲಿ. [QE][QS]ಯೆಹೋವನಿಗೆ ಸ್ತೋತ್ರ! [QE]