1. {ವಿಮುಕ್ತರ ಕೊಂಡಾಟ} [PS] ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; [QBR] ಆತನು ಒಳ್ಳೆಯವನು. [QBR] ಆತನ ಕೃಪೆಯು ಶಾಶ್ವತವಾಗಿರುವುದು. [QBR]
2. ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ, [QBR]
3. ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, [QBR] ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ. [QBR]
4. ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, [QBR] ದಾರಿತಪ್ಪಿ ಅಲೆಯುವವರಾಗಿ, [QBR] ಜನವಿರುವ ಊರನ್ನು ಕಾಣದೆ, [QBR]
5. ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು. [QBR]
6. ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, [QBR] ಆತನು ಅವರನ್ನು ಕಷ್ಟದಿಂದ ಬಿಡಿಸಿದನು. [QBR]
7. ಜನವಿರುವ ಊರನ್ನು ಸೇರುವಂತೆ, [QBR] ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು. [QBR]
8. ಅವರು ಯೆಹೋವನ ಕೃಪೆಗೋಸ್ಕರವೂ, [QBR] ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, [QBR] ಆತನನ್ನು ಕೊಂಡಾಡಲಿ. [QBR]
9. ಆತನು ಬಾಯಾರಿದವರ ಆಶೆಯನ್ನು ಪೂರೈಸಿ, [QBR] ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ. [QBR]
10. ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, [QBR] ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು. [QBR]
11. ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, [QBR] ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ, [QBR]
12. ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; [QBR] ನಿರಾಶ್ರಯರಾಗಿ ಬಿದ್ದುಹೋದರು. [QBR]
13. ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, [QBR] ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. [QBR]
14. ಆತನು ಅವರ ಬಂಧನಗಳನ್ನು ತೆಗೆದುಹಾಕಿ, [QBR] ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು. [QBR]
15. ಅವರು ಯೆಹೋವನ ಕೃಪೆಗೋಸ್ಕರವೂ, [QBR] ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, [QBR] ಆತನನ್ನು ಕೊಂಡಾಡಲಿ. [QBR]
16. ಆತನು ತಾಮ್ರದ ಕದಗಳನ್ನು ಒಡೆದು, [QBR] ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ. [QBR]
17. ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು. [QBR]
18. ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು. [QBR]
19. ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, [QBR] ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. [QBR]
20. ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, [QBR] ಅವರನ್ನು ಗುಣಪಡಿಸಿದನು; [QBR] ಸಮಾಧಿಗೆ ಸೇರದಂತೆ ಮಾಡಿದನು. [QBR]
21. ಅವರು ಯೆಹೋವನ ಕೃಪೆಗೋಸ್ಕರವೂ, [QBR] ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, [QBR] ಆತನನ್ನು ಕೊಂಡಾಡಲಿ. [QBR]
22. ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, [QBR] ಉತ್ಸಾಹಧ್ವನಿಮಾಡುತ್ತಾ [QBR] ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ. [QBR]
23. ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, [QBR] ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು, [QBR]
24. ಯೆಹೋವನ ಮಹತ್ಕಾರ್ಯಗಳನ್ನೂ, [QBR] ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. [QBR]
25. ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, [QBR] ಅದರಲ್ಲಿ ತೆರೆಗಳನ್ನು ಎಬ್ಬಿಸಿತು. [QBR]
26. ಜನರು [* ಜನರು ಅಥವಾ ನಾವಿಕರು.] ಆಕಾಶಕ್ಕೆ ಏರುತ್ತಲೂ, [QBR] ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು. [QBR]
27. ಅವರು ದಿಕ್ಕುತೋರದವರಾಗಿ ಸುತ್ತುತ್ತಾ, [QBR] ಕುಡುಕರಂತೆ ಹೊಯ್ದಾಡುತ್ತಿದ್ದರು. [QBR]
28. ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, [QBR] ಆತನು ಅವರನ್ನು ಕಷ್ಟದಿಂದ ಹೊರತಂದನು. [QBR]
29. ಆತನು ಬಿರುಗಾಳಿಯನ್ನು ಶಾಂತಪಡಿಸಿದನು; [QBR] ತೆರೆಗಳು ನಿಂತವು. [QBR]
30. ಸಮುದ್ರವು ಶಾಂತವಾದುದರಿಂದ, [QBR] ಹಡಗಿನವರು ಸಂತೋಷಪಟ್ಟರು, [QBR] ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು. [QBR]
31. ಅವರು ಯೆಹೋವನ ಕೃಪೆಗೋಸ್ಕರವೂ [QBR] ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ [QBR] ಆತನನ್ನು ಕೊಂಡಾಡಲಿ. [QBR]
32. ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; [QBR] ಹಿರಿಯರ ಸಮೂಹದಲ್ಲಿ ಕೊಂಡಾಡಲಿ. [QBR]
33. ಆತನು ನಿವಾಸಿಗಳ ದುಷ್ಟತನಕ್ಕಾಗಿ [QBR] ನದಿಗಳನ್ನು ಅರಣ್ಯವಾಗುವಂತೆಯೂ, [QBR]
34. ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, [QBR] ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು. [QBR]
35. ಅರಣ್ಯವನ್ನು ಕೆರೆಯಾಗಿಯೂ, [QBR] ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ, [QBR]
36. ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; [QBR] ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು, [QBR]
37. ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, [QBR] ಆದಾಯವನ್ನು ಕೂಡಿಸಿಕೊಂಡರು. [QBR]
38. ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. [QBR] ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ. [QBR]
39. ಅವರು ಕೇಡು ತೊಂದರೆಗಳಿಂದಲೂ, [QBR] ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು. [QBR]
40. ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, [QBR] ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು. [QBR]
41. ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, [QBR] ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು. [QBR]
42. ಯಥಾರ್ಥರು ಇದನ್ನು ನೋಡಿ ಹಿಗ್ಗುವರು; [QBR] ಕೆಡುಕುಬಾಯಿ ಮುಚ್ಚಿಹೋಗುವುದು. [QBR]
43. ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, [QBR] ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ. [PE]