3. {#3ಜಯದ ವಾಗ್ದಾನ ನೆರವೇರಬೇಕೆಂಬ ಪ್ರಾರ್ಥನೆ }[PS]*ದಾವೀದನ ಕೀರ್ತನೆ. *[PE][QS]ದೇವರೇ, ನನ್ನ ಹೃದಯವು ಸ್ಥಿರವಾಗಿದೆ; [QE][QS]ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ! [QE]
2. [QS]ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. [QE][QS]ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. [QE]
3. [QS]ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; [QE][QS]ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. [QE]
4. [QS]ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, [QE][QS]ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ. [QE]
5. [QS]ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; [QE][QS]ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. [QE]
6. [QS]ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, [QE][QS]ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. [QE]
7. [QS]ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. [QE][QS]ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. [QE][QS]ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು. [QE]
8. [QS]ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. [QE][QS]ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. [QE][QS]ನನ್ನ ರಾಜದಂಡವು ಯೆಹೂದ ಕುಲವೇ. [QE]
9. [QS]ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; [QE][QS]ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. [QE][QS]ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು. [QE]
10. [QS]ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? [QE][QS]ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? [QE]
11. [QS]ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! [QE][QS]ದೇವರೇ, ನಮ್ಮನ್ನು ಕೈಬಿಟ್ಟಿಯಾ? [QE]
12. [QS]ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. [QE][QS]ಮನುಷ್ಯರ ಸಹಾಯವು ವ್ಯರ್ಥ. [QE]
13. [QS]ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; [QE][QS]ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. [QE]