1. ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ. [QBR]
2. ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. [QBR] ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ. [QBR]
3. ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, [QBR] ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ. [QBR]
4. ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; [QBR] ನಾನಾದರೋ ನಿನಗೆ ಮೊರೆಯಿಡುತ್ತೇನೆ. [QBR]
5. ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; [QBR] ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ. [QBR]
6. ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; [QBR] ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು. [QBR]
7. ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; [QBR] ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ. [QBR]
8. ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; [QBR] ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ. [QBR]
9. ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ. [QBR]
10. ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, [QBR] ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ. [QBR]
11. ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; [QBR] ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ. [QBR]
12. ಅವನಿಗೆ ಯಾರೂ ಕೃಪೆತೋರಿಸದಿರಲಿ, [QBR] ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ, [QBR]
13. ಅವನ ಸಂತತಿಯು ನಿರ್ಮೂಲವಾಗಲಿ; [QBR] ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ. [QBR]
14. ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; [QBR] ಅವನ ತಾಯಿಯ ಪಾಪವು ಅಳಿದುಹೋಗದಿರಲಿ. [QBR]
15. ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. [QBR] ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ. [QBR]
16. ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, [QBR] ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು. [QBR]
17. ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! [QBR] ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ! [QBR]
18. ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, [QBR] ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, [QBR] ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ. [QBR]
19. ಶಾಪವೇ ಅವನ ಹೊದಿಕೆಯಂತೆಯೂ, [QBR] ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ. [QBR]
20. ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ [QBR] ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ. [QBR]
21. ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; [QBR] ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು. [QBR]
22. ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! [QBR] ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ. [QBR]
23. ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; [QBR] ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ. [QBR]
24. ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; [QBR] ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು. [QBR]
25. ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; [QBR] ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ. [QBR]
26. ಯೆಹೋವನೇ, ನನ್ನ ದೇವರೇ, ಸಹಾಯಮಾಡು; [QBR] ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು. [QBR]
27. ಆಗ ಅವರು ಇದು ನಿನ್ನ ಕೈಕೆಲಸವೆಂದೂ, [QBR] ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು. [QBR]
28. ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. [QBR] ಅವರು ಎದ್ದು ಅಪಮಾನ ಹೊಂದುವರು. [QBR] ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು. [QBR]
29. ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; [QBR] ನಾಚಿಕೆಯೇ ಅವರ ಹೊದಿಕೆಯಾಗಲಿ. [QBR]
30. ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; [QBR] ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು. [QBR]
31. ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, [QBR] ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು. [PE]