1. ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?
|
2. ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ,
ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. |
4. ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ;
ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. |
5. ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ;
ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. |
7. ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ.
ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು. PE |