ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ? [QBR]
2. ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, [QBR] ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. [QBR]
3. ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು? [QBR]
4. ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; [QBR] ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. [QBR] ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; [QBR] ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. [QBR]
5. ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; [QBR] ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. [QBR]
6. ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. [QBR] ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ. [QBR]
7. ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. [QBR] ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 150
ಕೀರ್ತನೆಗಳು 11:84
1 ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ? 2 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. 3 ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು? 4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. 5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. 6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ. 7 ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 150
Common Bible Languages
West Indian Languages
×

Alert

×

kannada Letters Keypad References