ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ದೇವಸ್ತುತಿ [BR]ಕೀರ್ತ 112 } [QS]ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; [QE][QS]ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, [QE][QS]ಮನಃಪೂರ್ವಕವಾಗಿ ಕೀರ್ತಿಸುವೆನು. [QE]
2. [QS]ಯೆಹೋವನ ಕೃತ್ಯಗಳು ಮಹತ್ತಾದವುಗಳು; [QE][QS]ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. [QE]
3. [QS]ಆತನ ಕಾರ್ಯವು ಘನ, ಮಾನಗಳುಳ್ಳದ್ದು; [QE][QS]ಆತನ ನೀತಿಯು ಸದಾಕಾಲವೂ ಇರುವುದು. [QE]
4. [QS]ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. [QE][QS]ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. [QE]
5. [QS]ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; [QE][QS]ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ [QE]
6. [QS]ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ [QE][QS]ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ. [QE]
7. [QS]ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; [QE][QS]ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. [QE]
8. [QS]ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. [QE][QS]ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. [QE]
9. [QS]ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; [QE][QS]ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; [QE][QS]ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. [QE]
10. [QS]ಯೆಹೋವನ ಭಯವೇ ಜ್ಞಾನಕ್ಕೆ ಮೂಲ; [QE][QS]ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. [QE][QS]ಆತನ ಸ್ತುತಿಯು ನಿರಂತರವಾದದ್ದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
ದೇವಸ್ತುತಿ
ಕೀರ್ತ 112

1 ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. 2 ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. 3 ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು. 4 ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. 5 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ 6 ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ. 7 ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. 8 ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. 9 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. 10 ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
×

Alert

×

Kannada Letters Keypad References