1. ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; [QBR] ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, [QBR] ಮನಃಪೂರ್ವಕವಾಗಿ ಕೀರ್ತಿಸುವೆನು. [QBR]
2. ಯೆಹೋವನ ಕೃತ್ಯಗಳು ಮಹತ್ತಾದವುಗಳು; [QBR] ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. [QBR]
3. ಆತನ ಕಾರ್ಯವು ಘನ, ಮಾನಗಳುಳ್ಳದ್ದು; [QBR] ಆತನ ನೀತಿಯು ಸದಾಕಾಲವೂ ಇರುವುದು. [QBR]
4. ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. [QBR] ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. [QBR]
5. ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; [QBR] ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ [QBR]
6. ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ [QBR] ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ. [QBR]
7. ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; [QBR] ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. [QBR]
8. ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. [QBR] ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. [QBR]
9. ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; [QBR] ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; [QBR] ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. [QBR]
10. ಯೆಹೋವನ ಭಯವೇ ಜ್ಞಾನಕ್ಕೆ ಮೂಲ; [QBR] ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. [QBR] ಆತನ ಸ್ತುತಿಯು ನಿರಂತರವಾದದ್ದು. [PE]