ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; [QBR] ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, [QBR] ಮನಃಪೂರ್ವಕವಾಗಿ ಕೀರ್ತಿಸುವೆನು. [QBR]
2. ಯೆಹೋವನ ಕೃತ್ಯಗಳು ಮಹತ್ತಾದವುಗಳು; [QBR] ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. [QBR]
3. ಆತನ ಕಾರ್ಯವು ಘನ, ಮಾನಗಳುಳ್ಳದ್ದು; [QBR] ಆತನ ನೀತಿಯು ಸದಾಕಾಲವೂ ಇರುವುದು. [QBR]
4. ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. [QBR] ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. [QBR]
5. ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; [QBR] ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ [QBR]
6. ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ [QBR] ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ. [QBR]
7. ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; [QBR] ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. [QBR]
8. ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. [QBR] ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. [QBR]
9. ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; [QBR] ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; [QBR] ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. [QBR]
10. ಯೆಹೋವನ ಭಯವೇ ಜ್ಞಾನಕ್ಕೆ ಮೂಲ; [QBR] ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. [QBR] ಆತನ ಸ್ತುತಿಯು ನಿರಂತರವಾದದ್ದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
ಕೀರ್ತನೆಗಳು 111:86
1 ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. 2 ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. 3 ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು. 4 ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. 5 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ 6 ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ. 7 ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. 8 ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. 9 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. 10 ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
Common Bible Languages
West Indian Languages
×

Alert

×

kannada Letters Keypad References