ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಭಕ್ತರ ಧನ್ಯತೆ [BR]ಕೀರ್ತ 111 } [QS]ಯೆಹೋವನಿಗೆ ಸ್ತೋತ್ರ! [QE][QS]ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, [QE][QS]ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. [QE]
2. [QS]ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; [QE][QS]ನೀತಿವಂತನ ವಂಶವು ಶುಭಹೊಂದುವುದು. [QE]
3. [QS]ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; [QE][QS]ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. [QE]
4. [QS]ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; [QE][QS]ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. [QE]
5. [QS]ದಯಾಳುವಾಗಿ ಧನಸಹಾಯ ಮಾಡುವವನೂ, [QE][QS]ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. [QE]
6. [QS]ಅವನು ಎಂದಿಗೂ ಕದಲುವುದಿಲ್ಲ; [QE][QS]ನೀತಿವಂತನನ್ನು ಯಾವಾಗಲೂ ಸ್ಮರಿಸುವರು. [QE]
7. [QS]ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; [QE][QS]ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, [QE][QS]ಅವನ ಮನಸ್ಸು ಸ್ಥಿರವಾಗಿರುವುದು. [QE]
8. [QS]ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ [QE][QS]ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. [QE]
9. [QS]ಬಡವರಿಗೆ ಉದಾರವಾಗಿ ಕೊಡುತ್ತಾನೆ; [QE][QS]ಅವನ ನೀತಿಯ ಫಲವು ಸದಾಕಾಲವೂ ಇರುವುದು. [QE][QS][* ಅಥವಾ ಅವನು ಬಲಿಷ್ಠನಾಗುವನು. ]ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. [QE]
10. [QS]ದುಷ್ಟನು ನೋಡಿ ವ್ಯಥೆಪಡುವನು; [QE][QS]ಅವನು ಹಲ್ಲುಕಡಿಯುತ್ತಾ ನಾಶವಾಗುವನು. [QE][QS]ದುಷ್ಟರ ನಿರೀಕ್ಷೆಯು ಭಂಗವಾಗುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 112 / 150
ಭಕ್ತರ ಧನ್ಯತೆ
ಕೀರ್ತ 111

1 ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2 ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 3 ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. 4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. 5 ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 6 ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. 7 ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. 8 ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. 9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. * ಅಥವಾ ಅವನು ಬಲಿಷ್ಠನಾಗುವನು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. 10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 112 / 150
×

Alert

×

Kannada Letters Keypad References