ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! [QBR] ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, [QBR] ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. [QBR]
2. ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; [QBR] ನೀತಿವಂತನ ವಂಶವು ಶುಭಹೊಂದುವುದು. [QBR]
3. ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; [QBR] ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. [QBR]
4. ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; [QBR] ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. [QBR]
5. ದಯಾಳುವಾಗಿ ಧನಸಹಾಯ ಮಾಡುವವನೂ, [QBR] ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. [QBR]
6. ಅವನು ಎಂದಿಗೂ ಕದಲುವುದಿಲ್ಲ; [QBR] ನೀತಿವಂತನನ್ನು ಯಾವಾಗಲೂ ಸ್ಮರಿಸುವರು. [QBR]
7. ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; [QBR] ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, [QBR] ಅವನ ಮನಸ್ಸು ಸ್ಥಿರವಾಗಿರುವುದು. [QBR]
8. ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ [QBR] ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. [QBR]
9. ಬಡವರಿಗೆ ಉದಾರವಾಗಿ ಕೊಡುತ್ತಾನೆ; [QBR] ಅವನ ನೀತಿಯ ಫಲವು ಸದಾಕಾಲವೂ ಇರುವುದು. [QBR] [* ಅಥವಾ ಅವನು ಬಲಿಷ್ಠನಾಗುವನು.] ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. [QBR]
10. ದುಷ್ಟನು ನೋಡಿ ವ್ಯಥೆಪಡುವನು; [QBR] ಅವನು ಹಲ್ಲುಕಡಿಯುತ್ತಾ ನಾಶವಾಗುವನು. [QBR] ದುಷ್ಟರ ನಿರೀಕ್ಷೆಯು ಭಂಗವಾಗುವುದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 112 / 150
ಕೀರ್ತನೆಗಳು 112:77
1 ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2 ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 3 ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. 4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. 5 ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 6 ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. 7 ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. 8 ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. 9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. * ಅಥವಾ ಅವನು ಬಲಿಷ್ಠನಾಗುವನು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. 10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 112 / 150
Common Bible Languages
West Indian Languages
×

Alert

×

kannada Letters Keypad References