ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! [QBR] ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; [QBR] ಯೆಹೋವನ ನಾಮವನ್ನು ಸ್ತುತಿಸಿರಿ. [QBR]
2. ಈಗಿನಿಂದ ಯುಗಯುಗಕ್ಕೂ, [QBR] ಯೆಹೋವನ ನಾಮವು ಕೀರ್ತಿಸಲ್ಪಡಲಿ. [QBR]
3. ಯೆಹೋವನ ನಾಮವು ಪೂರ್ವದಿಂದ, [QBR] ಪಶ್ಚಿಮದವರೆಗೂ ಸ್ತುತಿಹೊಂದಲಿ. [QBR]
4. ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; [QBR] ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. [QBR]
5. ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? [QBR] ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, [QBR]
6. ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. [QBR]
7. ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, [QBR] ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. [QBR]
8. ಪ್ರಭುಗಳ ಜೊತೆಯಲ್ಲಿ, [QBR] ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. [QBR]
9. ಬಂಜೆಯು ಮಕ್ಕಳೊಂದಿಗೆ, [QBR] ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. [QBR] ಯೆಹೋವನಿಗೆ ಸ್ತೋತ್ರ! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 113 / 150
ಕೀರ್ತನೆಗಳು 113:175
1 ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. 2 ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. 3 ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ. 4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. 5 ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, 6 ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. 7 ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. 8 ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. 9 ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 113 / 150
Common Bible Languages
West Indian Languages
×

Alert

×

kannada Letters Keypad References