ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಯೆಹೋವನನ್ನು ಸ್ತುತಿಸುವುದು } [QS]ಯೆಹೋವನಿಗೆ ಸ್ತೋತ್ರ! [QE][QS]ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; [QE][QS]ಯೆಹೋವನ ನಾಮವನ್ನು ಸ್ತುತಿಸಿರಿ. [QE]
2. [QS]ಈಗಿನಿಂದ ಯುಗಯುಗಕ್ಕೂ, [QE][QS]ಯೆಹೋವನ ನಾಮವು ಕೀರ್ತಿಸಲ್ಪಡಲಿ. [QE]
3. [QS]ಯೆಹೋವನ ನಾಮವು ಪೂರ್ವದಿಂದ, [QE][QS]ಪಶ್ಚಿಮದವರೆಗೂ ಸ್ತುತಿಹೊಂದಲಿ. [QE]
4. [QS]ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; [QE][QS]ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. [QE]
5. [QS]ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? [QE][QS]ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, [QE]
6. [QS]ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. [QE]
7. [QS]ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, [QE][QS]ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. [QE]
8. [QS]ಪ್ರಭುಗಳ ಜೊತೆಯಲ್ಲಿ, [QE][QS]ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. [QE]
9. [QS]ಬಂಜೆಯು ಮಕ್ಕಳೊಂದಿಗೆ, [QE][QS]ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. [QE][QS]ಯೆಹೋವನಿಗೆ ಸ್ತೋತ್ರ! [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 113 / 150
ಯೆಹೋವನನ್ನು ಸ್ತುತಿಸುವುದು 1 ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. 2 ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. 3 ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ. 4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. 5 ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, 6 ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. 7 ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. 8 ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. 9 ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 113 / 150
×

Alert

×

Kannada Letters Keypad References