1. ಇಸ್ರಾಯೇಲರು ಐಗುಪ್ತ ದೇಶವನ್ನೂ, [QBR] ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ, [QBR]
2. ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, [QBR] ಇಸ್ರಾಯೇಲ್ ಆತನ ರಾಜ್ಯವೂ ಆಯಿತು. [QBR]
3. ಸಮುದ್ರವು ಕಂಡು ಓಡಿಹೋಯಿತು; [QBR] ಯೊರ್ದನ್ ಹೊಳೆಯು ಹಿಂದಿರುಗಿತು. [QBR]
4. ಪರ್ವತಗಳು ಟಗರುಗಳಂತೆಯೂ, [QBR] ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು. [QBR]
5. ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? [QBR] ಯೊರ್ದನೇ, ಏಕೆ ಹಿಂದಿರುಗುತ್ತೀ? [QBR]
6. ಪರ್ವತಗಳೇ, ನೀವು ಟಗರುಗಳಂತೆಯೂ, [QBR] ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ? [QBR]
7. ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, [QBR] ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. [QBR]
8. ಆತನು ಬಂಡೆಯನ್ನು ಕೆರೆಯನ್ನಾಗಿಯೂ, [QBR] ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ. [PE]