ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಇಸ್ರಾಯೇಲರ ರಕ್ಷಕನ ಮಹತ್ವ } [QS]ಇಸ್ರಾಯೇಲರು ಐಗುಪ್ತ ದೇಶವನ್ನೂ, [QE][QS]ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ, [QE]
2. [QS]ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, [QE][QS]ಇಸ್ರಾಯೇಲ್ ಆತನ ರಾಜ್ಯವೂ ಆಯಿತು. [QE]
3. [QS]ಸಮುದ್ರವು ಕಂಡು ಓಡಿಹೋಯಿತು; [QE][QS]ಯೊರ್ದನ್ ಹೊಳೆಯು ಹಿಂದಿರುಗಿತು. [QE]
4. [QS]ಪರ್ವತಗಳು ಟಗರುಗಳಂತೆಯೂ, [QE][QS]ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು. [QE]
5. [QS]ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? [QE][QS]ಯೊರ್ದನೇ, ಏಕೆ ಹಿಂದಿರುಗುತ್ತೀ? [QE]
6. [QS]ಪರ್ವತಗಳೇ, ನೀವು ಟಗರುಗಳಂತೆಯೂ, [QE][QS]ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ? [QE]
7. [QS]ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, [QE][QS]ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. [QE]
8. [QS]ಆತನು ಬಂಡೆಯನ್ನು ಕೆರೆಯನ್ನಾಗಿಯೂ, [QE][QS]ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 114 / 150
ಇಸ್ರಾಯೇಲರ ರಕ್ಷಕನ ಮಹತ್ವ 1 ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ, 2 ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು. 3 ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು. 4 ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು. 5 ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ? 6 ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ? 7 ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. 8 ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 114 / 150
×

Alert

×

Kannada Letters Keypad References