ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನೊಬ್ಬನೇ ರಕ್ಷಕನು }[PS]*ದಾವೀದನ ಕೀರ್ತನೆ. *[PE][QS]ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ [QE][QS]ನಿನ್ನ ಹೆಸರನ್ನೇ ಘನಪಡಿಸು. [QE]
2. [QS]“ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು? [QE]
3. [QS]ನಮ್ಮ ದೇವರು ಪರಲೋಕದಲ್ಲಿದ್ದಾನೆ; [QE][QS]ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ. [QE]
4. [QS]ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; [QE][QS]ಅವು ಮನುಷ್ಯರ ಕೈಕೆಲಸವಷ್ಟೇ. [QE]
5. [QS]ಅವು ಬಾಯಿದ್ದರೂ ಮಾತನಾಡುವುದಿಲ್ಲ; [QE][QS]ಕಣ್ಣಿದ್ದರೂ ನೋಡುವುದಿಲ್ಲ. [QE]
6. [QS]ಕಿವಿಯಿದ್ದರೂ ಕೇಳುವುದಿಲ್ಲ; [QE][QS]ಮೂಗಿದ್ದರೂ ಮೂಸುವುದಿಲ್ಲ. [QE]
7. [QS]ಕೈಯುಂಟು ಮುಟ್ಟುವುದಿಲ್ಲ; [QE][QS]ಕಾಲುಂಟು ನಡೆಯುವುದಿಲ್ಲ; [QE][QS]ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ. [QE]
8. [QS]ಅವುಗಳನ್ನು ಮಾಡುವವರೂ, [QE][QS]ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ. [QE]
9. [QS]ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. [QE][QS]ಅವರ ಸಹಾಯಕನು, ಗುರಾಣಿಯು ಆತನೇ. [QE]
10. [QS]ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. [QE][QS]ಅವರ ಸಹಾಯಕನು, ಗುರಾಣಿಯು ಆತನೇ. [QE]
11. [QS]ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. [QE][QS]ಅವರ ಸಹಾಯಕನು, ಗುರಾಣಿಯು ಆತನೇ. [QE]
12. [QS]ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; [QE][QS]ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು. [QE]
13. [QS]ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; [QE][QS]ಆರೋನನ ಮನೆತನದವರನ್ನು ಆಶೀರ್ವದಿಸುವನು. [QE][QS]ತನ್ನ ಭಕ್ತರನ್ನು ಆಶೀರ್ವದಿಸುವನು. [QE]
14. [QS]ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ; [QE]
15. [QS]ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. [QE][QS]ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ. [QE]
16. [QS]ಪರಲೋಕವು ಯೆಹೋವನದು; [QE][QS]ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ. [QE]
17. [QS]ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; [QE][QS]ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ. [QE]
18. [QS]ನಾವೋ ಇಂದಿನಿಂದ ಸದಾಕಾಲವೂ [QE][QS]ಯೆಹೋವನನ್ನು ಕೊಂಡಾಡುವೆವು. [QE][QS]ಯೆಹೋವನಿಗೆ ಸ್ತೋತ್ರ! [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 115 / 150
ಯೆಹೋವನೊಬ್ಬನೇ ರಕ್ಷಕನು 3 ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು. 2 “ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು? 3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ. 4 ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. 5 ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ. 6 ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ. 7 ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ. 8 ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ. 9 ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. 10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. 11 ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. 12 ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು. 13 ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು. 14 ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ; 15 ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ. 16 ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ. 17 ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ. 18 ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 115 / 150
×

Alert

×

Kannada Letters Keypad References