ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಕೃತಜ್ಞತಾಯಜ್ಞ ಕೀರ್ತನೆ [BR]ಯೆಶಾ 38 } [QS]ಯೆಹೋವನನ್ನು ಪ್ರೀತಿಸುತ್ತೇನೆ; [QE][QS]ಆತನು ನನ್ನ ಮೊರೆಯನ್ನು ಕೇಳುವನು. [QE]
2. [QS]ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; [QE][QS]ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. [QE]
3. [QS]ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; [QE][QS]ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. [QE][QS]ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. [QE]
4. [QS]ಆಗ ಯೆಹೋವನ ಹೆಸರನ್ನು ಹೇಳಿ, [QE][QS]“ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು. [QE]
5. [QS]ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; [QE][QS]ನಮ್ಮ ದೇವರು ಕನಿಕರವುಳ್ಳವನು. [QE]
6. [QS]ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; [QE][QS]ಕುಗ್ಗಿದವನಾದ ನನ್ನನ್ನು ರಕ್ಷಿಸಿದನು. [QE]
7. [QS]ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. [QE][QS]ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ. [QE]
8. [QS]ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, [QE]
9. [QS]ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, [QE][QS]ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. [QE]
10. [QS]“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ, [QE]
11. [QS]“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, [QE][QS]ಭರವಸವುಳ್ಳವನಾಗಿಯೇ ಇದ್ದೆನು. [QE]
12. [QS]ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ? [QE]
13. [QS]ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, [QE][QS]ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. [QE]
14. [QS]ಯೆಹೋವನಿಗೆ ಹೊತ್ತ ಹರಕೆಗಳನ್ನು, [QE][QS]ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. [QE]
15. [QS]ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. [QE]
16. [QS]ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; [QE][QS]ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. [QE][QS]ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. [QE]
17. [QS]ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; [QE][QS]ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. [QE]
18. [QS]ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, [QE][QS]ಯೆಹೋವನ ಮಂದಿರದ ಅಂಗಳಗಳಲ್ಲಿ, [QE]
19. [QS]ಆತನಿಗೆ ಹೊತ್ತ ಹರಕೆಗಳನ್ನು, [QE][QS]ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. [QE][QS]ಯೆಹೋವನಿಗೆ ಸ್ತೋತ್ರ! [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 116 / 150
ಕೃತಜ್ಞತಾಯಜ್ಞ ಕೀರ್ತನೆ
ಯೆಶಾ 38

1 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು. 2 ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. 3 ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. 4 ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು. 5 ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು. 6 ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು. 7 ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ. 8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, 9 ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. 10 “ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ, 11 “ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು. 12 ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ? 13 ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 14 ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. 15 ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. 16 ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. 17 ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 18 ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ, 19 ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 116 / 150
×

Alert

×

Kannada Letters Keypad References