1. ಯೆಹೋವನನ್ನು ಪ್ರೀತಿಸುತ್ತೇನೆ; [QBR] ಆತನು ನನ್ನ ಮೊರೆಯನ್ನು ಕೇಳುವನು. [QBR]
2. ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; [QBR] ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. [QBR]
3. ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; [QBR] ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. [QBR] ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. [QBR]
4. ಆಗ ಯೆಹೋವನ ಹೆಸರನ್ನು ಹೇಳಿ, [QBR] “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು. [QBR]
5. ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; [QBR] ನಮ್ಮ ದೇವರು ಕನಿಕರವುಳ್ಳವನು. [QBR]
6. ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; [QBR] ಕುಗ್ಗಿದವನಾದ ನನ್ನನ್ನು ರಕ್ಷಿಸಿದನು. [QBR]
7. ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. [QBR] ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ. [QBR]
8. ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, [QBR]
9. ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, [QBR] ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. [QBR]
10. “ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ, [QBR]
11. “ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, [QBR] ಭರವಸವುಳ್ಳವನಾಗಿಯೇ ಇದ್ದೆನು. [QBR]
12. ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ? [QBR]
13. ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, [QBR] ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. [QBR]
14. ಯೆಹೋವನಿಗೆ ಹೊತ್ತ ಹರಕೆಗಳನ್ನು, [QBR] ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. [QBR]
15. ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. [QBR]
16. ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; [QBR] ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. [QBR] ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. [QBR]
17. ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; [QBR] ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. [QBR]
18. ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, [QBR] ಯೆಹೋವನ ಮಂದಿರದ ಅಂಗಳಗಳಲ್ಲಿ, [QBR]
19. ಆತನಿಗೆ ಹೊತ್ತ ಹರಕೆಗಳನ್ನು, [QBR] ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. [QBR] ಯೆಹೋವನಿಗೆ ಸ್ತೋತ್ರ! [PE]