ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಹಬ್ಬದ ಗೀತೆ [BR]ನೆಹೆ 8:14-18; ಯೆಶಾ 12 } [QS]ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; [QE][QS]ಆತನು ಒಳ್ಳೆಯವನು. [QE][QS]ಆತನ ಕೃಪೆಯು ಶಾಶ್ವತವಾಗಿದೆ. [QE]
2. [QS]ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QE]
3. [QS]ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QE]
4. [QS]ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QE]
5. [QS]ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; [QE][QS]ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. [QE]
6. [QS]ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. [QE][QS]ಮನುಷ್ಯನು ನನಗೆ ಏನು ಮಾಡಾನು? [QE]
7. [QS]ಯೆಹೋವನು ನನಗೆ ಇದ್ದಾನೆ; [QE][QS]ಆತನೇ ನನಗೆ ಸಹಾಯಕನು; [QE][QS]ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು. [QE]
8. [QS]ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, [QE][QS]ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. [QE]
9. [QS]ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, [QE][QS]ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. [QE]
10. [QS]ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; [QE][QS]ಯೆಹೋವನ ಬಲದಿಂದ[* ಬಲದಿಂದ ಅಥವಾ ಹೆಸರಿನಿಂದ. ] ಅವರನ್ನು ಸಂಹರಿಸುವೆನು. [QE]
11. [QS]ಅವರು ನನ್ನನ್ನು ಸುತ್ತಲೂ ಮುತ್ತಿದರು; [QE][QS]ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು. [QE]
12. [QS]ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; [QE][QS]ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. [QE][QS]ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. [QE]
13. [QS]ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; [QE][QS]ಆದರೆ ಯೆಹೋವನು ನನಗೆ ಸಹಾಯ ಮಾಡಿದನು. [QE]
14. [QS]ನನ್ನ ಬಲವು, ಕೀರ್ತನೆಯು ಯೆಹೋವನೇ; [QE][QS]ಆತನಿಂದ ನನಗೆ ರಕ್ಷಣೆಯುಂಟಾಯಿತು. [QE]
15. [QS]ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; [QE][QS]ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. [QE]
16. [QS]ಯೆಹೋವನ ಬಲಗೈ ಉನ್ನತವಾಗಿದೆ; [QE][QS]ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. [QE]
17. [QS]ನಾನು ಸಾಯುವುದಿಲ್ಲ; [QE][QS]ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. [QE]
18. [QS]ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; [QE][QS]ಆದರೆ ಮರಣಕ್ಕೆ ಒಪ್ಪಿಸಲಿಲ್ಲ. [QE]
19. [QS]ನೀತಿದ್ವಾರಗಳನ್ನು[† ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ. ] ತೆರೆಯಿರಿ; [QE][QS]ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. [QE]
20. [QS]ಇದು ಯೆಹೋವನ ಮಂದಿರದ್ವಾರವು; [QE][QS]ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. [QE]
21. [QS]ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, [QE][QS]ನಿನ್ನನ್ನು ಕೊಂಡಾಡುತ್ತೇನೆ. [QE]
22. [QS]ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, [QE][QS]ಮುಖ್ಯವಾದ ಮೂಲೆಗಲ್ಲಾಯಿತು; [QE]
23. [QS]ಇದು ಯೆಹೋವನಿಂದಲೇ ಆಯಿತು; [QE][QS]ನಮಗೆ ಆಶ್ಚರ್ಯವಾಗಿ ತೋರುತ್ತದೆ. [QE]
24. [QS]ಈ ದಿನವು ಯೆಹೋವನಿಂದಲೇ ನೇಮಕವಾದದ್ದು; [QE][QS]ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ. [QE]
25. [QS]ಯೆಹೋವನೇ, ದಯವಿಟ್ಟು ರಕ್ಷಿಸು; [QE][QS]ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. [QE]
26. [QS]ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; [QE][QS]ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. [QE]
27. [QS]ಯೆಹೋವನೇ ದೇವರು; [QE][QS]ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. [QE][QS]ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ [QE][QS]ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. [QE]
28. [QS]ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; [QE][QS]ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. [QE]
29. [QS]ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; [QE][QS]ಆತನು ಒಳ್ಳೆಯವನು. [QE][QS]ಆತನ ಕೃಪೆಯು ಶಾಶ್ವತವಾದದ್ದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 118 / 150
ಹಬ್ಬದ ಗೀತೆ
ನೆಹೆ 8:14-18; ಯೆಶಾ 12

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 2 ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 3 ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 4 ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 5 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. 6 ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು? 7 ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು. 8 ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 9 ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 10 ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ* ಬಲದಿಂದ ಅಥವಾ ಹೆಸರಿನಿಂದ. ಅವರನ್ನು ಸಂಹರಿಸುವೆನು. 11 ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು. 12 ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. 13 ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು. 14 ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು. 15 ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 16 ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 17 ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. 18 ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ. 19 ನೀತಿದ್ವಾರಗಳನ್ನು ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ. ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. 20 ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. 21 ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. 22 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; 23 ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. 24 ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ. 25 ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. 26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. 27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. 28 ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. 29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 118 / 150
×

Alert

×

Kannada Letters Keypad References