ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; [QBR] ಆತನು ಒಳ್ಳೆಯವನು. [QBR] ಆತನ ಕೃಪೆಯು ಶಾಶ್ವತವಾಗಿದೆ. [QBR]
2. ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QBR]
3. ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QBR]
4. ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QBR]
5. ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; [QBR] ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. [QBR]
6. ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. [QBR] ಮನುಷ್ಯನು ನನಗೆ ಏನು ಮಾಡಾನು? [QBR]
7. ಯೆಹೋವನು ನನಗೆ ಇದ್ದಾನೆ; [QBR] ಆತನೇ ನನಗೆ ಸಹಾಯಕನು; [QBR] ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು. [QBR]
8. ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, [QBR] ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. [QBR]
9. ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, [QBR] ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. [QBR]
10. ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; [QBR] ಯೆಹೋವನ ಬಲದಿಂದ [* ಬಲದಿಂದ ಅಥವಾ ಹೆಸರಿನಿಂದ. ] ಅವರನ್ನು ಸಂಹರಿಸುವೆನು. [QBR]
11. ಅವರು ನನ್ನನ್ನು ಸುತ್ತಲೂ ಮುತ್ತಿದರು; [QBR] ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು. [QBR]
12. ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; [QBR] ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. [QBR] ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. [QBR]
13. ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; [QBR] ಆದರೆ ಯೆಹೋವನು ನನಗೆ ಸಹಾಯ ಮಾಡಿದನು. [QBR]
14. ನನ್ನ ಬಲವು, ಕೀರ್ತನೆಯು ಯೆಹೋವನೇ; [QBR] ಆತನಿಂದ ನನಗೆ ರಕ್ಷಣೆಯುಂಟಾಯಿತು. [QBR]
15. ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; [QBR] ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. [QBR]
16. ಯೆಹೋವನ ಬಲಗೈ ಉನ್ನತವಾಗಿದೆ; [QBR] ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. [QBR]
17. ನಾನು ಸಾಯುವುದಿಲ್ಲ; [QBR] ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. [QBR]
18. ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; [QBR] ಆದರೆ ಮರಣಕ್ಕೆ ಒಪ್ಪಿಸಲಿಲ್ಲ. [QBR]
19. ನೀತಿದ್ವಾರಗಳನ್ನು [† ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ.] ತೆರೆಯಿರಿ; [QBR] ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. [QBR]
20. ಇದು ಯೆಹೋವನ ಮಂದಿರದ್ವಾರವು; [QBR] ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. [QBR]
21. ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, [QBR] ನಿನ್ನನ್ನು ಕೊಂಡಾಡುತ್ತೇನೆ. [QBR]
22. ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, [QBR] ಮುಖ್ಯವಾದ ಮೂಲೆಗಲ್ಲಾಯಿತು; [QBR]
23. ಇದು ಯೆಹೋವನಿಂದಲೇ ಆಯಿತು; [QBR] ನಮಗೆ ಆಶ್ಚರ್ಯವಾಗಿ ತೋರುತ್ತದೆ. [QBR]
24. ಈ ದಿನವು ಯೆಹೋವನಿಂದಲೇ ನೇಮಕವಾದದ್ದು; [QBR] ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ. [QBR]
25. ಯೆಹೋವನೇ, ದಯವಿಟ್ಟು ರಕ್ಷಿಸು; [QBR] ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. [QBR]
26. ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; [QBR] ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. [QBR]
27. ಯೆಹೋವನೇ ದೇವರು; [QBR] ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. [QBR] ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ [QBR] ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. [QBR]
28. ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; [QBR] ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. [QBR]
29. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; [QBR] ಆತನು ಒಳ್ಳೆಯವನು. [QBR] ಆತನ ಕೃಪೆಯು ಶಾಶ್ವತವಾದದ್ದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 118 / 150
ಕೀರ್ತನೆಗಳು 118:136
1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 2 ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 3 ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 4 ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 5 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. 6 ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು? 7 ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು. 8 ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 9 ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. 10 ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ * ಬಲದಿಂದ ಅಥವಾ ಹೆಸರಿನಿಂದ. ಅವರನ್ನು ಸಂಹರಿಸುವೆನು. 11 ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು. 12 ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. 13 ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು. 14 ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು. 15 ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 16 ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 17 ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. 18 ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ. 19 ನೀತಿದ್ವಾರಗಳನ್ನು ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ. ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. 20 ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. 21 ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. 22 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; 23 ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. 24 ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ. 25 ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. 26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. 27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. 28 ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. 29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 118 / 150
Common Bible Languages
West Indian Languages
×

Alert

×

kannada Letters Keypad References