ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; [QBR] ಆತನು ಒಳ್ಳೆಯವನು. [QBR] ಆತನ ಕೃಪೆಯು ಶಾಶ್ವತವಾಗಿದೆ. [QBR]
2. ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QBR]
3. ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QBR]
4. ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. [QBR]
5. ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; [QBR] ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. [QBR]
6. ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. [QBR] ಮನುಷ್ಯನು ನನಗೆ ಏನು ಮಾಡಾನು? [QBR]
7. ಯೆಹೋವನು ನನಗೆ ಇದ್ದಾನೆ; [QBR] ಆತನೇ ನನಗೆ ಸಹಾಯಕನು; [QBR] ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು. [QBR]
8. ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, [QBR] ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. [QBR]
9. ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, [QBR] ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. [QBR]
10. ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; [QBR] ಯೆಹೋವನ ಬಲದಿಂದ [* ಬಲದಿಂದ ಅಥವಾ ಹೆಸರಿನಿಂದ. ] ಅವರನ್ನು ಸಂಹರಿಸುವೆನು. [QBR]
11. ಅವರು ನನ್ನನ್ನು ಸುತ್ತಲೂ ಮುತ್ತಿದರು; [QBR] ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು. [QBR]
12. ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; [QBR] ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. [QBR] ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. [QBR]
13. ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ; [QBR] ಆದರೆ ಯೆಹೋವನು ನನಗೆ ಸಹಾಯ ಮಾಡಿದನು. [QBR]
14. ನನ್ನ ಬಲವು, ಕೀರ್ತನೆಯು ಯೆಹೋವನೇ; [QBR] ಆತನಿಂದ ನನಗೆ ರಕ್ಷಣೆಯುಂಟಾಯಿತು. [QBR]
15. ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; [QBR] ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. [QBR]
16. ಯೆಹೋವನ ಬಲಗೈ ಉನ್ನತವಾಗಿದೆ; [QBR] ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. [QBR]
17. ನಾನು ಸಾಯುವುದಿಲ್ಲ; [QBR] ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. [QBR]
18. ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; [QBR] ಆದರೆ ಮರಣಕ್ಕೆ ಒಪ್ಪಿಸಲಿಲ್ಲ. [QBR]
19. ನೀತಿದ್ವಾರಗಳನ್ನು [† ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ.] ತೆರೆಯಿರಿ; [QBR] ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. [QBR]
20. ಇದು ಯೆಹೋವನ ಮಂದಿರದ್ವಾರವು; [QBR] ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. [QBR]
21. ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, [QBR] ನಿನ್ನನ್ನು ಕೊಂಡಾಡುತ್ತೇನೆ. [QBR]
22. ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, [QBR] ಮುಖ್ಯವಾದ ಮೂಲೆಗಲ್ಲಾಯಿತು; [QBR]
23. ಇದು ಯೆಹೋವನಿಂದಲೇ ಆಯಿತು; [QBR] ನಮಗೆ ಆಶ್ಚರ್ಯವಾಗಿ ತೋರುತ್ತದೆ. [QBR]
24. ಈ ದಿನವು ಯೆಹೋವನಿಂದಲೇ ನೇಮಕವಾದದ್ದು; [QBR] ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ. [QBR]
25. ಯೆಹೋವನೇ, ದಯವಿಟ್ಟು ರಕ್ಷಿಸು; [QBR] ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. [QBR]
26. ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; [QBR] ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ. [QBR]
27. ಯೆಹೋವನೇ ದೇವರು; [QBR] ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. [QBR] ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ [QBR] ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. [QBR]
28. ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; [QBR] ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. [QBR]
29. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; [QBR] ಆತನು ಒಳ್ಳೆಯವನು. [QBR] ಆತನ ಕೃಪೆಯು ಶಾಶ್ವತವಾದದ್ದು. [PE]

Notes

No Verse Added

Total 150 Chapters, Current Chapter 118 of Total Chapters 150
ಕೀರ್ತನೆಗಳು 118:21
1. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
ಆತನು ಒಳ್ಳೆಯವನು.
ಆತನ ಕೃಪೆಯು ಶಾಶ್ವತವಾಗಿದೆ.
2. ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
3. ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
4. ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
5. ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;
ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
6. ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು.
ಮನುಷ್ಯನು ನನಗೆ ಏನು ಮಾಡಾನು?
7. ಯೆಹೋವನು ನನಗೆ ಇದ್ದಾನೆ;
ಆತನೇ ನನಗೆ ಸಹಾಯಕನು;
ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
8. ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ,
ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
9. ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ,
ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
10. ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು;
ಯೆಹೋವನ ಬಲದಿಂದ * ಬಲದಿಂದ ಅಥವಾ ಹೆಸರಿನಿಂದ. ಅವರನ್ನು ಸಂಹರಿಸುವೆನು.
11. ಅವರು ನನ್ನನ್ನು ಸುತ್ತಲೂ ಮುತ್ತಿದರು;
ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.
12. ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ;
ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು.
ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
13. ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ;
ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
14. ನನ್ನ ಬಲವು, ಕೀರ್ತನೆಯು ಯೆಹೋವನೇ;
ಆತನಿಂದ ನನಗೆ ರಕ್ಷಣೆಯುಂಟಾಯಿತು.
15. ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ;
ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
16. ಯೆಹೋವನ ಬಲಗೈ ಉನ್ನತವಾಗಿದೆ;
ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
17. ನಾನು ಸಾಯುವುದಿಲ್ಲ;
ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.
18. ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು;
ಆದರೆ ಮರಣಕ್ಕೆ ಒಪ್ಪಿಸಲಿಲ್ಲ.
19. ನೀತಿದ್ವಾರಗಳನ್ನು ನೀತಿದ್ವಾರಗಳನ್ನು ಅಥವಾ ದೇವಜನರು ಪ್ರವೇಶಿಸುವಂಥ ದ್ವಾರವನ್ನು ಅಥವಾ ದೇವಾಲಯದ ದ್ವಾರವನ್ನು ತೆರೆಯಿರಿ. ತೆರೆಯಿರಿ;
ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
20. ಇದು ಯೆಹೋವನ ಮಂದಿರದ್ವಾರವು;
ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.
21. ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ,
ನಿನ್ನನ್ನು ಕೊಂಡಾಡುತ್ತೇನೆ.
22. ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ,
ಮುಖ್ಯವಾದ ಮೂಲೆಗಲ್ಲಾಯಿತು;
23. ಇದು ಯೆಹೋವನಿಂದಲೇ ಆಯಿತು;
ನಮಗೆ ಆಶ್ಚರ್ಯವಾಗಿ ತೋರುತ್ತದೆ.
24. ದಿನವು ಯೆಹೋವನಿಂದಲೇ ನೇಮಕವಾದದ್ದು;
ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
25. ಯೆಹೋವನೇ, ದಯವಿಟ್ಟು ರಕ್ಷಿಸು;
ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.
26. ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ;
ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
27. ಯೆಹೋವನೇ ದೇವರು;
ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ.
ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ
ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
28. ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ;
ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
29. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
ಆತನು ಒಳ್ಳೆಯವನು.
ಆತನ ಕೃಪೆಯು ಶಾಶ್ವತವಾದದ್ದು. PE
Total 150 Chapters, Current Chapter 118 of Total Chapters 150
×

Alert

×

kannada Letters Keypad References