1. {ಧರ್ಮಶಾಸ್ತ್ರದ ಅನುಕರಣೆ} [PS] ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, [QBR] ಸದಾಚಾರಿಗಳಾಗಿ ನಡೆಯುವವರು ಧನ್ಯರು. [QBR]
2. ಆತನ ಕಟ್ಟಳೆಗಳನ್ನು ಕೈಕೊಂಡು, [QBR] ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು. [QBR]
3. ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, [QBR] ಅನ್ಯಾಯ ಮಾಡುವುದೇ ಇಲ್ಲ. [QBR]
4. ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, [QBR] ನೀನೇ ಆಜ್ಞಾಪಿಸಿರುತ್ತಿ. [QBR]
5. ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, [QBR] ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು! [QBR]
6. ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, [QBR] ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ. [QBR]
7. ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, [QBR] ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು. [QBR]
8. ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು, [QBR] ಸಂಪೂರ್ಣವಾಗಿ ಕೈಬಿಡಬೇಡ. ಬೇತ್.
9. {ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು} [PS] ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? [QBR] ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ. [QBR]
10. ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, [QBR] ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು. [QBR]
11. ನಿನಗೆ ವಿರುದ್ಧವಾಗಿ ಪಾಪಮಾಡದಂತೆ, [QBR] ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. [QBR]
12. ಸ್ತುತಿಪಾತ್ರನಾದ ಯೆಹೋವನೇ, [QBR] ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. [QBR]
13. ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, [QBR] ನನ್ನ ತುಟಿಗಳು ವರ್ಣಿಸುತ್ತವೆ. [QBR]
14. ಸರ್ವಸಂಪತ್ತಿನಲ್ಲಿ ಹೇಗೋ, [QBR] ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ. [QBR]
15. ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ, [QBR] ನಿನ್ನ ದಾರಿಯನ್ನು ಲಕ್ಷಿಸುವೆನು. [QBR]
16. ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, [QBR] ನಿನ್ನ ವಾಕ್ಯವನ್ನು ಮರೆಯುವುದಿಲ್ಲ. ಗಿಮೆಲ್.
17. {ದೇವರಾಜ್ಞೆಗಳಲ್ಲಿ ಸಂತೋಷಿಸುವುದು} [PS] ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, [QBR] ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು. [QBR]
18. ನನ್ನ ಕಣ್ಣುಗಳನ್ನು ತೆರೆ, [QBR] ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು. [QBR]
19. ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, [QBR] ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ. [QBR]
20. ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ [QBR] ನನ್ನ ಪ್ರಾಣವು ಜಜ್ಜಿಹೋಗಿದೆ. [QBR]
21. ನೀನು ಗರ್ವಿಷ್ಠರನ್ನು ಗದರಿಸುತ್ತಿ, [QBR] ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು. [QBR]
22. ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, [QBR] ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು. [QBR]
23. ಪ್ರಭುಗಳು ಕುಳಿತುಕೊಂಡು, [QBR] ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, [QBR] ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು. [QBR]
24. ನಿನ್ನ ಕಟ್ಟಳೆಗಳು ನನ್ನ ಪರಮಾನಂದ, [QBR] ಅವೇ ನನ್ನ ಮಾರ್ಗದರ್ಶನ. ದಾಲಿತ್.
25. {ಆಜ್ಞಾಮಾರ್ಗದಲ್ಲಿ ನಡೆಯುವ ನಿರ್ಧಾರ} [PS] ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, [QBR] ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QBR]
26. ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ, [QBR] ನನಗೆ ಸದುತ್ತರವನ್ನು ದಯಪಾಲಿಸಿದಿ, [QBR] ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QBR]
27. ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, [QBR] ಆಗ ನಿನ್ನ ಬೋಧನೆಗಳನ್ನು [* ಬೋಧನೆಗಳನ್ನು ಅದ್ಭುತಕೃತ್ಯಗಳನ್ನು.] ಧ್ಯಾನಿಸುವೆನು. [QBR]
28. ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ, [QBR] ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು. [QBR]
29. ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, [QBR] ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು. [QBR]
30. ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, [QBR] ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ. [QBR]
31. ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, [QBR] ಯೆಹೋವನೇ, ನನಗೆ ಆಶಾಭಂಗಪಡಿಸಬೇಡ. [QBR]
32. ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, [QBR] ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.
33. {ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ} [PS] ಯೆಹೋವನೇ, ನಿನ್ನ ಕಟ್ಟಳೆಗಳ [QBR] ಮಾರ್ಗವನ್ನು ನನಗೆ ಉಪದೇಶಿಸು, [QBR] ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು. [QBR]
34. ನನಗೆ ತಿಳಿವಳಿಕೆಯನ್ನು ದಯಪಾಲಿಸು, [QBR] ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು. [QBR]
35. ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, [QBR] ಅದೇ ನನ್ನ ಇಷ್ಟ. [QBR]
36. ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, [QBR] ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು. [QBR]
37. ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, [QBR] ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು. [QBR]
38. ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು, [QBR] ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು. [QBR]
39. ನನ್ನ ಅವಮಾನವನ್ನು ತೊಲಗಿಸು, [QBR] ಅದಕ್ಕೋಸ್ಕರ ಅಂಜುತ್ತಿದ್ದೇನೆ. [QBR] ನಿನ್ನ ಕಟ್ಟಳೆಗಳು ಹಿತಕರವಾಗಿವೆ. [QBR]
40. ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, [QBR] ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್.
41. {ಭರವಸಕ್ಕೆ ಆಧಾರವಾದ ದೇವರ ಕಟ್ಟಳೆಗಳು} [PS] ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, [QBR] ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ. [QBR]
42. ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, [QBR] ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ. [QBR]
43. ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. [QBR] ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ. [QBR]
44. ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು. [QBR]
45. ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, [QBR] ಸರಾಗವಾಗಿ ನಡೆಯುವೆನು. [QBR]
46. ನಿನ್ನ ಕಟ್ಟಳೆಗಳ ವಿಷಯವಾಗಿ, [QBR] ಅರಸುಗಳ ಮುಂದೆಯೂ ಮಾತನಾಡುವೆನು, [QBR] ನಾಚಿಕೆಪಡುವುದಿಲ್ಲ. [QBR]
47. ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, [QBR] ಅವು ನನಗೆ ಇಷ್ಟವಾಗಿವೆ. [QBR]
48. ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, [QBR] ಅವುಗಳನ್ನು ನಾನು ಪ್ರೀತಿಸುತ್ತೇನೆ, [QBR] ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ. ಸಾಯಿನ್.
49. {ಚೈತನ್ಯಗೊಳಿಸುವ ಯೆಹೋವನ ನುಡಿ} [PS] ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, [QBR] ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ! [QBR]
50. ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, [QBR] ಆಪತ್ಕಾಲದಲ್ಲಿ ಇದೇ ನನಗೆ ಆದರಣೆ. [QBR]
51. ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, [QBR] ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ. [QBR]
52. ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು, [QBR] ನನ್ನನ್ನು ಸಂತೈಸಿಕೊಂಡಿದ್ದೇನೆ. [QBR]
53. ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ. [QBR]
54. ನನ್ನ ಪ್ರವಾಸದ ಮನೆಯಲ್ಲಿ [QBR] ನಿನ್ನ ಕಟ್ಟಳೆಗಳು ನನಗೆ ಗಾಯನವಾದವು. [QBR]
55. ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, [QBR] ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ. [QBR]
56. ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು. ಹೇತ್.
57. {ಯೆಹೋವನ ನೀತಿವಿಧಿಗಳಲ್ಲಿ ಆಸಕ್ತಿ} [PS] ಯೆಹೋವನೇ, ನನ್ನ ಪಾಲು ನೀನೇ, [QBR] ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ. [QBR]
58. ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, [QBR] ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು. [QBR]
59. ನನ್ನ ನಡತೆಯನ್ನು ಶೋಧಿಸಿದೆನು, [QBR] ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ. [QBR]
60. ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, [QBR] ಆಲಸ್ಯಮಾಡಲಿಲ್ಲ. [QBR]
61. ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, [QBR] ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ. [QBR]
62. ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, [QBR] ಮಧ್ಯರಾತ್ರಿಯಲ್ಲಿ ಏಳುವೆನು. [QBR]
63. ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ [QBR] ನಾನು ಸಂಗಡಿಗನು. [QBR]
64. ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ, [QBR] ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು. ಟೇತ್.
65. {ದೇವರಾಜ್ಞೆಗಳ ಮೌಲ್ಯ} [PS] ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ, [QBR] ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ. [QBR]
66. ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, [QBR] ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ. [QBR]
67. ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, [QBR] ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ. [QBR]
68. ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, [QBR] ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು. [QBR]
69. ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, [QBR] ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು. [QBR]
70. ಅವರ ಹೃದಯದಲ್ಲಿ ಸತ್ಯವಿಲ್ಲ [† ಅವರ ಹೃದಯದಲ್ಲಿ ಸತ್ಯವಿಲ್ಲ ಕೊಬ್ಬಿನಂತೆ ಅವರ ಬುದ್ಧಿ ಮಂದವಾಯಿತು] , [QBR] ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ. [QBR]
71. ಕಷ್ಟಾನುಭವವು ಹಿತಕರವಾಯಿತು, [QBR] ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು. [QBR]
72. ನೀನು ಕೊಟ್ಟ ಧರ್ಮಶಾಸ್ತ್ರವು, [QBR] ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.
73. {ನ್ಯಾಯಬದ್ಧವಾದ ಕಟ್ಟಳೆಗಳು} [PS] ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, [QBR] ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು. [QBR]
74. ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, [QBR] ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ. [QBR]
75. ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, [QBR] ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ. [QBR]
76. ನಿನ್ನ ಸೇವಕನಿಗೆ ನುಡಿದ ಪ್ರಕಾರ, [QBR] ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು. [QBR]
77. ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, [QBR] ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ. [QBR]
78. ಗರ್ವಿಷ್ಠರು ಮಾನಭಂಗ ಹೊಂದಲಿ, [QBR] ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ. [QBR] ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು. [QBR]
79. ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು, [QBR] ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ. [QBR]
80. ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, [QBR] ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.
81. {ವಿಮೋಚನೆಗಾಗಿ ವಿಜ್ಞಾಪನೆ} [PS] ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, [QBR] ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ. [QBR]
82. ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ? [QBR] ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು. [QBR]
83. ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, [QBR] ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ. [QBR]
84. ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ! [QBR] ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ? [QBR]
85. ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು [QBR] ನನಗಾಗಿ ಗುಂಡಿಗಳನ್ನು ತೋಡಿದ್ದಾರೆ. [QBR]
86. ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, [QBR] ಅವರು ಮೋಸದಿಂದ ಹಿಂಸಿಸುತ್ತಾರೆ, [QBR] ನನಗೆ ಸಹಾಯಮಾಡು. [QBR]
87. ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, [QBR] ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ. [QBR]
88. ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, [‡ ನನ್ನನ್ನು ಕಾಪಾಡು, ನನ್ನನ್ನು ಚೈತನ್ಯಗೊಳಿಸು] [QBR] ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್.
89. {ಘನವಾದ ಆಜ್ಞಾಶಾಸನ} [PS] ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. [QBR]
90. ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. [QBR] ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ. [QBR]
91. ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, [QBR] ಸ್ಥಿರವಾಗಿ ನಿಂತಿರುತ್ತವೆ. [QBR] ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ. [QBR]
92. ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, [QBR] ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು. [QBR]
93. ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, [QBR] ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ. [QBR]
94. ನಾನು ನಿನ್ನವನು, ರಕ್ಷಿಸು, [QBR] ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ. [QBR]
95. ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, [QBR] ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು. [QBR]
96. ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, [QBR] ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. [§ ಅಪರಿಮಿತವಾದದ್ದು. ವಿಶಾಲವಾದದ್ದು.] ಮೆಮ್.
97. {ಜ್ಞಾನವಂತರನ್ನಾಗಿ ಮಾಡುವ ಧರ್ಮಶಾಸ್ತ್ರ} [PS] ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, [QBR] ದಿನವೆಲ್ಲಾ ಅದೇ ನನ್ನ ಧ್ಯಾನ. [QBR]
98. ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, [QBR] ಸದಾಕಾಲವೂ ಅವೇ ನನಗಿವೆ. [QBR]
99. ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, [QBR] ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ. [QBR]
100. ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ, [QBR] ಹಿರಿಯರಿಗಿಂತ ವಿವೇಕಿಯಾಗಿದ್ದೇನೆ. [QBR]
101. ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, [QBR] ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ. [QBR]
102. ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, [QBR] ಏಕೆಂದರೆ ನೀನು ನನಗೆ ಬೋಧಿಸಿದ್ದೀ. [QBR]
103. ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, [QBR] ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ. [QBR]
104. ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, [QBR] ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್. ದೇವರ ವಾಕ್ಯ ಕಾಲಿಗೆ ದೀಪ, ದಾರಿಗೆ ಬೆಳಕು [QBR]
105. ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, [QBR] ನನ್ನ ದಾರಿಗೆ ಬೆಳಕೂ ಆಗಿದೆ. [QBR]
106. ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, [QBR] ಅದನ್ನು ನೆರವೇರಿಸುವೆನು. [QBR]
107. ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, [QBR] ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. [QBR]
108. ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, [QBR] ದಯವಿಟ್ಟು ಅಂಗೀಕರಿಸು, [QBR] ನಿನ್ನ ವಿಧಿಗಳನ್ನು ನನಗೆ ಕಲಿಸು. [QBR]
109. [* ನನ್ನ ಜೀವವನ್ನು ಕೈಯಲ್ಲೇ ಹಿಡಿದಿದ್ದೇನೆ.] ನನ್ನ ಜೀವವು ಅಪಾಯದಲ್ಲಿದ್ದೆ, [QBR] ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ. [QBR]
110. ದುಷ್ಟರು ಬಲೆಯೊಡ್ಡಿದ್ದಾರೆ, [QBR] ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ. [QBR]
111. ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, [QBR] ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ. [QBR]
112. ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. ಸಾಮೆಕ್.
113. {ಆಶ್ರಯವಾಗಿರುವ ದೇವರಾಜ್ಞೆಗಳು} [PS] ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, [QBR] ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ. [QBR]
114. ನನ್ನ ಆಶ್ರಯವೂ, ಗುರಾಣಿಯೂ ನೀನೇ, [QBR] ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ. [QBR]
115. ದುಷ್ಟರೇ, ತೊಲಗಿರಿ, [QBR] ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು. [QBR]
116. ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, [QBR] ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, [QBR] ನನ್ನನ್ನು ನಿರಾಶೆಪಡಿಸಬೇಡ. [QBR]
117. ನೀನು ನನಗೆ ಆಧಾರವಾಗಿರು, [QBR] ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು. [QBR]
118. ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, [QBR] ಅವರ ಕುಯುಕ್ತಿಯು ವ್ಯರ್ಥವಾದದ್ದೇ. [QBR]
119. ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, [QBR] ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ. [QBR]
120. ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, [QBR] ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.
121. {ಅಪರಂಜಿಗಿಂತಲೂ ಶ್ರೇಷ್ಠವಾದ ದೇವರ ವಾಕ್ಯಗಳು} [PS] ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, [QBR] ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ. [QBR]
122. ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, [QBR] ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ. [QBR]
123. ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, [QBR] ನನ್ನ ದೃಷ್ಟಿ ಮೊಬ್ಬಾಯಿತು. [QBR]
124. ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, [QBR] ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. [QBR]
125. ನಾನು ನಿನ್ನ ಸೇವಕನು, [QBR] ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು. [QBR]
126. ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, [QBR] ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ. [QBR]
127. ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, [QBR] ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ. [QBR]
128. ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, [QBR] ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.
129. {ಕಟ್ಟಳೆಗಳನ್ನು ಪಾಲಿಸುವ ತವಕ} [PS] ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, [QBR] ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ. [QBR]
130. ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, [QBR] ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ. [QBR]
131. ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, [QBR] ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ. [QBR]
132. ನನಗೆ ಅಭಿಮುಖನಾಗಿ ಕರುಣಿಸು, [QBR] ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ? [QBR]
133. ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, [QBR] ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು. [QBR]
134. ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, [QBR] ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು. [QBR]
135. ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, [QBR] ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. [QBR]
136. ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, [QBR] ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.
137. {ಯೆಹೋವನ ನ್ಯಾಯ ವಿಧಿಗಳು} [PS] ಯೆಹೋವನೇ, ನೀನು ನೀತಿಸ್ವರೂಪನು, [QBR] ನಿನ್ನ ವಿಧಿಗಳು ನ್ಯಾಯವಾಗಿವೆ. [QBR]
138. ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ, [QBR]
139. ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ [QBR] ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು, [QBR]
140. ನಿನ್ನ ನುಡಿಯು ಪರಿಶುದ್ಧವಾದದ್ದು, [QBR] ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ. [QBR]
141. ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, [QBR] ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ. [QBR]
142. ನಿನ್ನ ನೀತಿಯು ನಿತ್ಯವಾಗಿದೆ, [QBR] ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ. [QBR]
143. ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ, [QBR] ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ. [QBR]
144. ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, [QBR] ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. ಖೋಫ್.
145. {ಯೆಹೋವನಿಗೆ ಮೊರೆಯಿಡುವುದು} [PS] ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, [QBR] ಸದುತ್ತರವನ್ನು ದಯಪಾಲಿಸು, [QBR] ನಿನ್ನ ನಿಬಂಧನೆಗಳನ್ನು ಅನುಸರಿಸುವೆನು. [QBR]
146. ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು. [QBR] ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು. [QBR]
147. ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು, [QBR] ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ. [QBR]
148. ನಿನ್ನ ನುಡಿಯನ್ನು ಧ್ಯಾನಿಸಲು, [QBR] ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ. [QBR]
149. ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, [QBR] ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. [QBR]
150. ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, [QBR] ನನ್ನ ಸಮೀಪಕ್ಕೆ ಬಂದಿದ್ದಾರೆ. [QBR]
151. ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ, [QBR] ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ. [QBR]
152. ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, [QBR] ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ರೇಷ್.
153. {ಸಂರಕ್ಷಣೆಗಾಗಿ ವಿಜ್ಞಾಪನೆ} [PS] ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, [QBR] ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ. [QBR]
154. ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, [QBR] ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. [QBR]
155. ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ. [QBR]
156. ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, [QBR] ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು. [QBR]
157. ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, [QBR] ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ. [QBR]
158. ನಿನ್ನ ನುಡಿಯನ್ನು ಕೈಗೊಳ್ಳದ [QBR] ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ. [QBR]
159. ಯೆಹೋವನೇ, ನೋಡು, [QBR] ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, [QBR] ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. [QBR]
160. ನಿನ್ನ ವಾಕ್ಯದ ಸಾರಾಂಶವು ಸತ್ಯವೇ, [QBR] ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. ಷಿನ್.
161. {ಎಷ್ಟೋ ಪ್ರಿಯವಾದ ನೀತಿವಿಧಿಗಳು} [PS] ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, [QBR] ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ. [QBR]
162. ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, [QBR] ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ. [QBR]
163. ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, [QBR] ಅದು ನನಗೆ ಅಸಹ್ಯವಾಗಿದೆ, [QBR] ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ. [QBR]
164. ನಿನ್ನ ನೀತಿವಿಧಿಗಳಿಗೋಸ್ಕರ, [QBR] ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ. [QBR]
165. ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, [QBR] ಸಂಪೂರ್ಣ ಸಮಾಧಾನವಿರುತ್ತದೆ, [QBR] ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ. [QBR]
166. ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, [QBR] ನಿರೀಕ್ಷಿಸುತ್ತಾ ಇದ್ದೇನೆ, [QBR] ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ. [QBR]
167. ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, [QBR] ಅವು ನನಗೆ ಬಹುಪ್ರಿಯವಾಗಿವೆ. [QBR]
168. ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, [QBR] ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. ತಾವ್.
169. {ಯೆಹೋವನ ಸಹಾಯಕ್ಕಾಗಿ ಬೇಡಿಕೊಳ್ಳುವುದು} [PS] ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, [QBR] ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು. [QBR]
170. ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, [QBR] ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು. [QBR]
171. ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. [QBR] ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ, [QBR]
172. ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, [QBR] ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು. [QBR]
173. ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ, [QBR] ನಿನ್ನ ಕೈ ನನಗೆ ನೆರವಾಗಲಿ. [QBR]
174. ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, [QBR] ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು. [QBR]
175. ನನ್ನ ಪ್ರಾಣವನ್ನು ಉಳಿಸು, [QBR] ಅದು ನಿನ್ನನ್ನು ಕೊಂಡಾಡಲಿ. [QBR] ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ. [QBR]
176. ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, [QBR] ನಿನ್ನ ಸೇವಕನನ್ನು ಪರಾಂಬರಿಸು. [QBR] ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ. [PE]