ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. [QBR] ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. [QBR]
2. ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, [QBR] ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. [QBR]
3. ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. [QBR]
4. ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; [QBR] ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. [QBR]
5. ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; [QBR] ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. [QBR] ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. [QBR] ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. [QBR]
6. ಯೆಹೋವನ ಮಾತುಗಳು ಯಥಾರ್ಥವಾದವುಗಳೇ; [QBR] ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. [QBR]
7. ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, [QBR] ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, [QBR]
8. ಯೆಹೋವನೇ, ನೀನು [* ಅಥವಾ ಅವರನ್ನು. ] ನಮ್ಮನ್ನು ನೋಡಿದ್ದಿ, [QBR] ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
ಕೀರ್ತನೆಗಳು 12:8
1 ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. 2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. 3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. 4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. 5 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. 6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. 7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, 8 ಯೆಹೋವನೇ, ನೀನು * ಅಥವಾ ಅವರನ್ನು. ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 150
Common Bible Languages
West Indian Languages
×

Alert

×

kannada Letters Keypad References