1. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” [QBR] ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. [QBR]
2. ಯೆರೂಸಲೇಮೇ! ನಮ್ಮ ಕಾಲುಗಳು, [QBR] ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. [QBR]
3. ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, [QBR] ಕಟ್ಟಲ್ಪಟ್ಟ ನಗರವಾಗಿದ್ದಿ. [QBR]
4. ಕುಲಗಳು ಅಂದರೆ ಯೆಹೋವನ ಕುಲದವರು, [QBR] ಯೆಹೋವನ ನಾಮದ ಕೀರ್ತನೆಗೋಸ್ಕರ, [QBR] ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. [QBR] ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. [QBR]
5. ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, [QBR] ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. [QBR]
6. ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. [QBR] “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ. [QBR]
7. ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; [QBR] ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” [QBR]
8. ನನ್ನ ಬಂಧುಮಿತ್ರರ ನಿಮಿತ್ತವಾಗಿ, [QBR] “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ. [QBR]
9. ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, [QBR] ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. [PE]