ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನು ಮನೆಯನ್ನು ಕಟ್ಟದಿದ್ದರೆ, [QBR] ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; [QBR] ಯೆಹೋವನು ಪಟ್ಟಣವನ್ನು ಕಾಯದಿದ್ದರೆ, [QBR] ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. [QBR]
2. ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, [QBR] ಹೊತ್ತು ಮೀರಿ ಮಲಗುವವರೇ, [QBR] ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; [QBR] [* ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ.] ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. [QBR]
3. ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; [QBR] ಗರ್ಭಫಲವು ಆತನ ಬಹುಮಾನವೇ. [QBR]
4. ಯೌವನದಲ್ಲಿ ಹುಟ್ಟಿದ ಮಕ್ಕಳು, [QBR] ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; [QBR]
5. ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. [QBR] ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ [QBR] ಅಂಥವರು ಅವಮಾನ ಹೊಂದುವುದಿಲ್ಲ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 127 / 150
ಕೀರ್ತನೆಗಳು 127:38
1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. 2 ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; * ಅಥವಾ ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅಥವಾ ಪ್ರತಿಫಲವನ್ನು ಕೊಡುತ್ತಾನೆ. ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. 3 ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. 4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; 5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 127 / 150
Common Bible Languages
West Indian Languages
×

Alert

×

kannada Letters Keypad References