2. ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು,
ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? |
3. ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು;
ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. |
4. ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು;
ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. |
5. ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;
ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. |