ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದಾವೀದನ ಮನೆತನವನ್ನು ಪುನಃಸ್ಥಾಪಿಸಬೇಕೆಂಬ ಪ್ರಾರ್ಥನೆ }[PS]*ಯಾತ್ರಾಗೀತೆ. [BR]ಕೀರ್ತ 89; 2ಸಮು 7 *[PE][QS]ಯೆಹೋವನೇ, ದಾವೀದನ ಹಿತಕ್ಕೋಸ್ಕರ, [QE][QS]ಅವನ ಶ್ರಮೆಗಳನ್ನು ನೆನಪುಮಾಡಿಕೋ. [QE]
2. [QS]ಯಾಕೋಬನ ಶೂರನಾದ ಯೆಹೋವನಿಗಾಗಿ [QE][QS]ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ, [QE]
3. [QS]“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, [QE][QS]ಮಂಚವನ್ನು ಹತ್ತುವುದಿಲ್ಲ, [QE]
4. [QS]ಕಣ್ಣುಗಳನ್ನು ಮುಚ್ಚುವುದಿಲ್ಲ, [QE][QS]ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು [QE]
5. [QS]ಅವನು ಯೆಹೋವನಿಗೆ ಪ್ರಮಾಣಮಾಡಿ, [QE][QS]ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ. [QE]
6. [QS]ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; [QE][QS]ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು. [QE]
7. [QS]“ಬನ್ನಿರಿ, ಆತನ ಮಂದಿರಕ್ಕೆ ಹೋಗಿ [QE][QS]ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!” [QE]
8. [QS]ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, [QE][QS]ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು. [QE]
9. [QS]ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; [QE][QS]ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ. [QE]
10. [QS]ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; [QE][QS]ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ. [QE]
11. [QS]ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; [QE][QS]ಆತನು ಅದನ್ನು ಬದಲಿಸುವುದಿಲ್ಲ. [QE][QS]“ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು; [QE]
12. [QS]ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, [QE][QS]ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, [QE][QS]ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.” [QE]
13. [QS]ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, [QE][QS]ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ. [QE]
14. [QS]ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; [QE][QS]ಇಲ್ಲೇ ಇರುವೆನು; ಇದು ನನಗೆ ಇಷ್ಟ. [QE]
15. [QS]ಇದರ ಆದಾಯವನ್ನು ಆಶೀರ್ವದಿಸುವೆನು; [QE][QS]ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು; [QE]
16. [QS]ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; [QE][QS]ಭಕ್ತರು ಉತ್ಸಾಹಧ್ವನಿ ಮಾಡುವರು. [QE]
17. [QS]ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; [QE][QS]ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ. [QE]
18. [QS]ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; [QE][QS]ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.” [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 132 / 150
ದಾವೀದನ ಮನೆತನವನ್ನು ಪುನಃಸ್ಥಾಪಿಸಬೇಕೆಂಬ ಪ್ರಾರ್ಥನೆ 3 *ಯಾತ್ರಾಗೀತೆ.
ಕೀರ್ತ 89; 2ಸಮು 7 *
ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ. 2 ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ, 3 “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ, 4 ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು 5 ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ. 6 ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು. 7 “ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!” 8 ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು. 9 ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ. 10 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ. 11 ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು; 12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.” 13 ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ. 14 ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ. 15 ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು; 16 ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು. 17 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ. 18 ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 132 / 150
×

Alert

×

Kannada Letters Keypad References