ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ದಾವೀದನ ಹಿತಕ್ಕೋಸ್ಕರ, [QBR] ಅವನ ಶ್ರಮೆಗಳನ್ನು ನೆನಪುಮಾಡಿಕೋ. [QBR]
2. ಯಾಕೋಬನ ಶೂರನಾದ ಯೆಹೋವನಿಗಾಗಿ [QBR] ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ, [QBR]
3. “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, [QBR] ಮಂಚವನ್ನು ಹತ್ತುವುದಿಲ್ಲ, [QBR]
4. ಕಣ್ಣುಗಳನ್ನು ಮುಚ್ಚುವುದಿಲ್ಲ, [QBR] ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು [QBR]
5. ಅವನು ಯೆಹೋವನಿಗೆ ಪ್ರಮಾಣಮಾಡಿ, [QBR] ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ. [QBR]
6. ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; [QBR] ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು. [QBR]
7. “ಬನ್ನಿರಿ, ಆತನ ಮಂದಿರಕ್ಕೆ ಹೋಗಿ [QBR] ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!” [QBR]
8. ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, [QBR] ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು. [QBR]
9. ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; [QBR] ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ. [QBR]
10. ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; [QBR] ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ. [QBR]
11. ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; [QBR] ಆತನು ಅದನ್ನು ಬದಲಿಸುವುದಿಲ್ಲ. [QBR] “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು; [QBR]
12. ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, [QBR] ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, [QBR] ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.” [QBR]
13. ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, [QBR] ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ. [QBR]
14. ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; [QBR] ಇಲ್ಲೇ ಇರುವೆನು; ಇದು ನನಗೆ ಇಷ್ಟ. [QBR]
15. ಇದರ ಆದಾಯವನ್ನು ಆಶೀರ್ವದಿಸುವೆನು; [QBR] ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು; [QBR]
16. ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; [QBR] ಭಕ್ತರು ಉತ್ಸಾಹಧ್ವನಿ ಮಾಡುವರು. [QBR]
17. ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; [QBR] ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ. [QBR]
18. ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; [QBR] ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.” [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 132 / 150
ಕೀರ್ತನೆಗಳು 132:64
1 ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ. 2 ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ, 3 “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ, 4 ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು 5 ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ. 6 ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು. 7 “ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!” 8 ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು. 9 ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ. 10 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ. 11 ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು; 12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.” 13 ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ. 14 ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ. 15 ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು; 16 ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು. 17 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ. 18 ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 132 / 150
Common Bible Languages
West Indian Languages
×

Alert

×

kannada Letters Keypad References