ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! [QBR] ಯೆಹೋವನ ನಾಮವನ್ನು ಸ್ತುತಿಸಿರಿ. [QBR] ಯೆಹೋವನ ಸೇವಕರೇ, [QBR]
2. ಯೆಹೋವನ ಮಂದಿರದಲ್ಲಿಯೂ, [QBR] ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, [QBR] ಆತನನ್ನು ಕೀರ್ತಿಸಿರಿ. [QBR]
3. ಯೆಹೋವನಿಗೆ ಸ್ತೋತ್ರ! [QBR] ಯೆಹೋವನು ಒಳ್ಳೆಯವನು. [QBR] ಆತನ ನಾಮವನ್ನು ಕೊಂಡಾಡಿರಿ; [QBR] ಆತನು ಕೃಪಾಪೂರ್ಣನು. [QBR]
4. ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, [QBR] ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ. [QBR]
5. ಯೆಹೋವನು ದೊಡ್ಡವನೆಂದೂ, [QBR] ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ. [QBR]
6. ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, [QBR] ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ [QBR] ತನಗೆ ಬೇಕಾದದ್ದನ್ನು ಮಾಡುತ್ತಾನೆ. [QBR]
7. ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; [QBR] ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; [QBR] ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. [QBR]
8. ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, [QBR] ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು. [QBR]
9. ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, [QBR] ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, [QBR] ಮಹತ್ಕಾರ್ಯಗಳನ್ನು ನಡೆಸಿದನು. [QBR]
10. ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; [QBR] ಬಲಿಷ್ಠ ರಾಜರನ್ನು ಕೊಂದುಹಾಕಿದನು. [QBR]
11. ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, [QBR] ಬಾಷಾನಿನ ಅರಸನಾದ ಓಗನೂ ಇದ್ದರು. [QBR] ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು. [QBR]
12. ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; [QBR] ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು. [QBR]
13. ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; [QBR] ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ. [QBR]
14. ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, [QBR] ತನ್ನ ಸೇವಕರನ್ನು ಕನಿಕರಿಸುವನು. [QBR]
15. ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; [QBR] ಅವು ಮನುಷ್ಯರ ಕೈಕೆಲಸವಷ್ಟೇ. [QBR]
16. ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, [QBR] ಕಣ್ಣಿದ್ದರೂ ನೋಡುವುದಿಲ್ಲ, [QBR]
17. ಕಿವಿಯಿದ್ದರೂ ಕೇಳುವುದಿಲ್ಲ, [QBR] ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ. [QBR]
18. ಅವುಗಳನ್ನು ಮಾಡುವವರು, [QBR] ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ. [QBR]
19. ಇಸ್ರಾಯೇಲನ ಮನೆತನದವರೇ, [QBR] ಯೆಹೋವನನ್ನು ಕೊಂಡಾಡಿರಿ; [QBR] ಆರೋನನ ಮನೆತನದವರೇ, [QBR] ಯೆಹೋವನನ್ನು ಕೊಂಡಾಡಿರಿ. [QBR]
20. ಲೇವಿಯ ಮನೆತನದವರೇ, [QBR] ಯೆಹೋವನನ್ನು ಕೊಂಡಾಡಿರಿ; [QBR] ಯೆಹೋವನ ಭಕ್ತರೇ, [QBR] ಯೆಹೋವನನ್ನು ಕೊಂಡಾಡಿರಿ. [QBR]
21. ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, [QBR] ಕೀರ್ತಿ ಉಂಟಾಗಲಿ, [QBR] ಯೆಹೋವನಿಗೆ ಸ್ತೋತ್ರ! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 135 / 150
ಕೀರ್ತನೆಗಳು 135:136
1 ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ, 2 ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ. 3 ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು. 4 ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ. 5 ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ. 6 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ. 7 ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. 8 ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು. 9 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು. 10 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು. 11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು. 12 ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು. 13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ. 14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು. 15 ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. 16 ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ, 17 ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ. 18 ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ. 19 ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. 20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ. 21 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 135 / 150
Common Bible Languages
West Indian Languages
×

Alert

×

kannada Letters Keypad References