1. {#3ಸೆರೆಯವರ ಪ್ರಲಾಪ [BR]2ಪೂರ್ವ 36 } [QS]ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, [QE][QS]ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು. [QE]
2. [QS]ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. [QE]
3. [QS]ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, [QE][QS]“ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು. [QE]
4. [QS]ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? [QE]
5. [QS]ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ [QE][QS][* ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ. ]ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. [QE]
6. [QS]ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, [QE][QS]ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, [QE][QS][† ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ. ]ನನ್ನ ನಾಲಿಗೆಯು ಸೇದಿಹೋಗಲಿ. [QE]
7. [QS]ಯೆಹೋವನೇ, ಎದೋಮ್ಯರ ಹಾನಿಗಾಗಿ, [QE][QS]ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. [QE][QS]ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ. [QE]
8. [QS]ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, [QE][QS]ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು. [QE]
9. [QS]ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ. [QE]