ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, [QBR] ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು. [QBR]
2. ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. [QBR]
3. ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, [QBR] “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು. [QBR]
4. ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? [QBR]
5. ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ [QBR] [* ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ.] ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. [QBR]
6. ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, [QBR] ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, [QBR] [† ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ.] ನನ್ನ ನಾಲಿಗೆಯು ಸೇದಿಹೋಗಲಿ. [QBR]
7. ಯೆಹೋವನೇ, ಎದೋಮ್ಯರ ಹಾನಿಗಾಗಿ, [QBR] ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. [QBR] ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ. [QBR]
8. ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, [QBR] ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು. [QBR]
9. ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 137 / 150
ಕೀರ್ತನೆಗಳು 137:94
1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು. 2 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. 3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು. 4 ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? 5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ * ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ. ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. 6 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ. ನನ್ನ ನಾಲಿಗೆಯು ಸೇದಿಹೋಗಲಿ. 7 ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ. 8 ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು. 9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 137 / 150
Common Bible Languages
West Indian Languages
×

Alert

×

kannada Letters Keypad References