3. {#3ಸರ್ವಜ್ಞಾನಿ, ಸರ್ವವ್ಯಾಪಿ ಅದ ದೇವರು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *[PE][QS]ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ; [QE]
2. [QS]ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, [QE][QS]ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ. [QE]
3. [QS]ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, [QE][QS]ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. [QE]
4. [QS]ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, [QE][QS]ನೀನು ಅರಿಯದೆ ಇರುವಂಥದು ಒಂದೂ ಇಲ್ಲ. [QE]
5. [QS]ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ. [QE]
6. [QS]ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; [QE][QS]ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ. [QE]
7. [QS]ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? [QE][QS]ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? [QE]
8. [QS]ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, [QE][QS]ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. [QE]
9. [QS]ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, [QE][QS]ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ, [QE]
10. [QS]ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; [QE][QS]ನಿನ್ನ ಬಲಗೈ ನನ್ನನ್ನು ಹಿಡಿದಿರುವುದು. [QE]
11. [QS]ಕಾರ್ಗತ್ತಲೆಯು ನನ್ನನ್ನು ಕವಿಯುವುದು, [QE][QS]“ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು? [QE]
12. [QS]ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, [QE][QS]ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ. [QE]
13. [QS]ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, [QE][QS]ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? [QE]
14. [QS]ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, [QE][QS]ನಿನ್ನನ್ನು ಕೊಂಡಾಡುತ್ತೇನೆ. [QE][QS]ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, [QE][QS]ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ. [QE]
15. [QS]ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, [QE][QS]ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, [QE][QS]ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ. [QE]
16. [QS]ನಾನು ಇನ್ನೂ ಕೇವಲ ಪಿಂಡವಾಗಿರುವಾಗ, [QE][QS]ನಿನ್ನ ಕಣ್ಣುಗಳು ನನ್ನನ್ನು ನೋಡಿದವು, [QE][QS]ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, [QE][QS]ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು. [QE]
17. [QS]ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, [QE][QS]ಅವುಗಳು ಎಷ್ಟೋ ಅಸಂಖ್ಯವಾಗಿವೆ. [QE]
18. [QS]ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, [QE][QS]ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ. [QE]
19. [QS]ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, [QE][QS]ಎಷ್ಟೋ ಒಳ್ಳೆಯದು. [QE][QS][* ರಕ್ತಪ್ರಿಯರೇ ]ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ. [QE]
20. [QS]ದೇವರೇ, ಅವರು ನಿನ್ನ ಶತ್ರುಗಳು, [QE][QS]ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ. [QE]
21. [QS]ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? [QE][QS]ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ? [QE]
22. [QS]ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, [QE][QS]ಅವರು ನನಗೂ ವೈರಿಗಳೇ ಆಗಿದ್ದಾರೆ. [QE]
23. [QS]ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, [QE][QS]ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ. [QE]
24. [QS]ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, [QE][QS]ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು. [QE]