ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದುಷ್ಟ ನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂಬ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. *[PE][QS]ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; [QE][QS]ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. [QE][QS]ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. [QE]
2. [QS]ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, [QE][QS]ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, [QE]
3. [QS]ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. [QE][QS]ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ. [QE]
4. [QS]ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? [QE][QS]ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; [QE][QS]ಯೆಹೋವನನ್ನು ಸ್ಮರಿಸುವುದಿಲ್ಲ. [QE]
5. [QS]ಅವರು ಫಕ್ಕನೆ ಭಯಭ್ರಾಂತರಾಗುವರು; [QE][QS]ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ. [QE]
6. [QS]ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ [QE][QS]ಯೆಹೋವನು ಅವರ ಆಶ್ರಯವಲ್ಲವೇ. [QE]
7. [QS]ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. [QE][QS]ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, [QE][QS]ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, [QE][QS]ಇಸ್ರಾಯೇಲರು ಹರ್ಷಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 150
ದುಷ್ಟ ನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂಬ ಪ್ರಾರ್ಥನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. *ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, 3 ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ. 4 ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ. 5 ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ. 6 ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ. 7 ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 150
×

Alert

×

Kannada Letters Keypad References