ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; [QBR] ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. [QBR] ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. [QBR]
2. ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, [QBR] ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, [QBR]
3. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. [QBR] ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ. [QBR]
4. ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? [QBR] ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; [QBR] ಯೆಹೋವನನ್ನು ಸ್ಮರಿಸುವುದಿಲ್ಲ. [QBR]
5. ಅವರು ಫಕ್ಕನೆ ಭಯಭ್ರಾಂತರಾಗುವರು; [QBR] ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ. [QBR]
6. ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ [QBR] ಯೆಹೋವನು ಅವರ ಆಶ್ರಯವಲ್ಲವೇ. [QBR]
7. ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. [QBR] ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, [QBR] ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, [QBR] ಇಸ್ರಾಯೇಲರು ಹರ್ಷಿಸುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 150
ಕೀರ್ತನೆಗಳು 14:40
1 ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, 3 ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ. 4 ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ. 5 ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ. 6 ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ. 7 ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 150
Common Bible Languages
West Indian Languages
×

Alert

×

kannada Letters Keypad References