1. ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ;
ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. |
2. ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ,
ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, |
4. ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ?
ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ. |
7. ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ.
ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು. PE |