ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, [QBR] ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು. [QBR]
2. ಅವರು ಕೇಡು ಕಲ್ಪಿಸುತ್ತಾರೆ, [QBR] ಯಾವಾಗಲೂ ಜಗಳವೆಬ್ಬಿಸುತ್ತಾರೆ. [QBR]
3. ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, [QBR] ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ
4. ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, [QBR] ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. [QBR] ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ. [QBR]
5. ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ [QBR] ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, [QBR] ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, [QBR] ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ
6. ನಾನು ಯೆಹೋವನಿಗೆ, “ನೀನೇ ನನ್ನ ದೇವರು, [QBR] ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು, [QBR]
7. ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, [QBR] [* ಅಥವಾ ಯುದ್ಧಸಮಯದಲ್ಲಿ ನೀನು ನನ್ನನ್ನು ಕಾಪಾಡಿದ್ದೀ.] ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ, [QBR]
8. ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, [QBR] ಅವರ ಆಶೆಗಳನ್ನು ನೆರವೇರಿಸಬೇಡ, [QBR] ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ
9. ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು [QBR] ಅವರ ತಲೆಯ ಮೇಲೆಯೇ ಬರಲಿ, [QBR]
10. ಅವರ ಮೇಲೆ ಕೆಂಡಗಳು ಸುರಿಯಲಿ, [QBR] ಅವರು ಅಗ್ನಿಕುಂಡದೊಳಕ್ಕೂ, [QBR] ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ. [QBR]
11. ಚಾಡಿಗಾರನು ದೇಶದಲ್ಲಿ ಉಳಿಯನು, [QBR] ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು. [QBR]
12. ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, [QBR] ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು. [QBR]
13. ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, [QBR] ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 140 / 150
ಕೀರ್ತನೆಗಳು 140:126
1 ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು. 2 ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ. 3 ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ 4 ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ. 5 ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ 6 ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು, 7 ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, * ಅಥವಾ ಯುದ್ಧಸಮಯದಲ್ಲಿ ನೀನು ನನ್ನನ್ನು ಕಾಪಾಡಿದ್ದೀ. ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ, 8 ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ 9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ, 10 ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ. 11 ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು. 12 ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು. 13 ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 140 / 150
Common Bible Languages
West Indian Languages
×

Alert

×

kannada Letters Keypad References