ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ಮೊರೆಯಿಡುತ್ತೇನೆ, [QBR] ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು. [QBR]
2. ನನ್ನ ಪ್ರಾರ್ಥನೆಯು ಧೂಪದಂತೆಯೂ, [QBR] ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ. [QBR]
3. ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, [QBR] ನನ್ನ ತುಟಿಗಳೆಂಬ ಕದವನ್ನು ಕಾಯಿ. [QBR]
4. ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, [QBR] ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. [QBR] ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ. [QBR]
5. ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, [QBR] ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, [QBR] ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. [QBR] ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು. [QBR]
6. ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, [QBR] ಜನರು ನನ್ನ ಮಾತುಗಳಿಗೆ ಕಿವಿಗೊಡುವರು, [QBR] ಅವು ಅವರಿಗೆ ಹಿತವಾಗಿರುವವು. [QBR]
7. ಒಬ್ಬನು ಹೊಲವನ್ನು ಉಳುತ್ತಾ, [QBR] ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, [QBR] ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. [QBR]
8. ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, [QBR] ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, [QBR] ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ. [QBR]
9. ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, [QBR] ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು. [QBR]
10. ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, [QBR] ಆಗ ನಾನು ತಪ್ಪಿಸಿಕೊಳ್ಳುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
ಕೀರ್ತನೆಗಳು 141:55
1 ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು. 2 ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ. 3 ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ. 4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ. 5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು. 6 ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು. 7 ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. 8 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ. 9 ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು. 10 ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
Common Bible Languages
West Indian Languages
×

Alert

×

kannada Letters Keypad References