ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಬಲಾತ್ಕಾರ ದುಷ್ಪ್ರೇರಣೆಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ }[PS]*ದಾವೀದನ ಕೀರ್ತನೆ. [BR]ಕೀರ್ತ 140 *[PE][QS]ಯೆಹೋವನೇ, ಮೊರೆಯಿಡುತ್ತೇನೆ, [QE][QS]ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು. [QE]
2. [QS]ನನ್ನ ಪ್ರಾರ್ಥನೆಯು ಧೂಪದಂತೆಯೂ, [QE][QS]ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ. [QE]
3. [QS]ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, [QE][QS]ನನ್ನ ತುಟಿಗಳೆಂಬ ಕದವನ್ನು ಕಾಯಿ. [QE]
4. [QS]ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, [QE][QS]ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. [QE][QS]ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ. [QE]
5. [QS]ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, [QE][QS]ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, [QE][QS]ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. [QE][QS]ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು. [QE]
6. [QS]ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, [QE][QS]ಜನರು ನನ್ನ ಮಾತುಗಳಿಗೆ ಕಿವಿಗೊಡುವರು, [QE][QS]ಅವು ಅವರಿಗೆ ಹಿತವಾಗಿರುವವು. [QE]
7. [QS]ಒಬ್ಬನು ಹೊಲವನ್ನು ಉಳುತ್ತಾ, [QE][QS]ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, [QE][QS]ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. [QE]
8. [QS]ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, [QE][QS]ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, [QE][QS]ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ. [QE]
9. [QS]ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, [QE][QS]ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು. [QE]
10. [QS]ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, [QE][QS]ಆಗ ನಾನು ತಪ್ಪಿಸಿಕೊಳ್ಳುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
ಬಲಾತ್ಕಾರ ದುಷ್ಪ್ರೇರಣೆಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ 3 *ದಾವೀದನ ಕೀರ್ತನೆ.
ಕೀರ್ತ 140 *
ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು. 2 ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ. 3 ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ. 4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ. 5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು. 6 ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು. 7 ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. 8 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ. 9 ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು. 10 ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
×

Alert

×

Kannada Letters Keypad References