1. ನಾನು ಯೆಹೋವನಿಗೆ ಮೊರೆಯಿಡುವೆನು, [QBR] ಯೆಹೋವನಿಗೆ ಕೂಗಿ ಬಿನ್ನೈಸುವೆನು. [QBR]
2. ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, [QBR] ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು. [QBR]
3. ನನ್ನ ಆತ್ಮವು ಕುಂದಿಹೋದಾಗ, [QBR] ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, [QBR] ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ. [QBR]
4. ನಾನು ನನ್ನ ಬಲಗಡೆಗೆ ನೋಡಲು, [QBR] ಅಲ್ಲಿ ಸಹಾಯಕರು ಯಾರೂ ಇಲ್ಲ, [QBR] ಆಶ್ರಯವೂ ನಾಶವಾಯಿತು, [QBR] ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. [QBR]
5. ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, [QBR] ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ. [QBR]
6. ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. [QBR] ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, [QBR] ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ. [QBR]
7. ಸೆರೆಯಿಂದ ನನ್ನನ್ನು ಬಿಡಿಸು, [QBR] ನಿನ್ನ ನಾಮವನ್ನು ಕೀರ್ತಿಸುವೆನು. [QBR] ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, [QBR] ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು. [PE]