ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಇಕ್ಕಟ್ಟಿನಲ್ಲಿದ್ದವನ ಪ್ರಾರ್ಥನೆ }[PS]*ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. [BR]ಕೀರ್ತ 140; 1ಸಮು 22; 24 *[PE][QS]ನಾನು ಯೆಹೋವನಿಗೆ ಮೊರೆಯಿಡುವೆನು, [QE][QS]ಯೆಹೋವನಿಗೆ ಕೂಗಿ ಬಿನ್ನೈಸುವೆನು. [QE]
2. [QS]ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, [QE][QS]ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು. [QE]
3. [QS]ನನ್ನ ಆತ್ಮವು ಕುಂದಿಹೋದಾಗ, [QE][QS]ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, [QE][QS]ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ. [QE]
4. [QS]ನಾನು ನನ್ನ ಬಲಗಡೆಗೆ ನೋಡಲು, [QE][QS]ಅಲ್ಲಿ ಸಹಾಯಕರು ಯಾರೂ ಇಲ್ಲ, [QE][QS]ಆಶ್ರಯವೂ ನಾಶವಾಯಿತು, [QE][QS]ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. [QE]
5. [QS]ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, [QE][QS]ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ. [QE]
6. [QS]ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. [QE][QS]ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, [QE][QS]ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ. [QE]
7. [QS]ಸೆರೆಯಿಂದ ನನ್ನನ್ನು ಬಿಡಿಸು, [QE][QS]ನಿನ್ನ ನಾಮವನ್ನು ಕೀರ್ತಿಸುವೆನು. [QE][QS]ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, [QE][QS]ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 142 / 150
ಇಕ್ಕಟ್ಟಿನಲ್ಲಿದ್ದವನ ಪ್ರಾರ್ಥನೆ 3 *ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ.
ಕೀರ್ತ 140; 1ಸಮು 22; 24 *
ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು. 2 ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು. 3 ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ. 4 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. 5 ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ. 6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ. 7 ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 142 / 150
×

Alert

×

Kannada Letters Keypad References