ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; [QBR] ನನ್ನ ಬಿನ್ನಹಕ್ಕೆ ಕಿವಿಗೊಡು; [QBR] ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. [QBR]
2. ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; [QBR] ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. [QBR]
3. ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; [QBR] ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. [QBR] ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; [QBR] ಬಹು ಕಾಲದಿಂದ ಸತ್ತವರಂತಿದ್ದೇನೆ. [QBR]
4. ನನ್ನ ಆತ್ಮವು ಕುಂದಿಹೋಗಿದೆ; [QBR] ನನ್ನ ಮನಸ್ಸು ಬೆರಗಾಗಿದೆ. [QBR]
5. ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; [QBR] ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; [QBR] ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ; [QBR]
6. ಕೈಚಾಚಿ ಬೇಡುತ್ತೇನೆ; [QBR] ಒಣನೆಲವು ನೀರಿಗಾಗಿ ಹೇಗೋ, [QBR] ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ
7. ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; [QBR] ನನ್ನ ಆತ್ಮವು ಕುಂದಿಹೋಗಿದೆ. [QBR] ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು. [QBR]
8. ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; [QBR] ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. [QBR] ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; [QBR] ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. [QBR]
9. ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; [QBR] ಶತ್ರುಗಳಿಂದ ನನ್ನನ್ನು ಬಿಡಿಸು. [QBR]
10. ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, [QBR] ನನ್ನ ದೇವರು ನೀನಲ್ಲವೋ? [QBR] ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ. [QBR]
11. ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; [QBR] ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು. [QBR]
12. ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. [QBR] ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; [QBR] ನಾನು ನಿನ್ನ ಸೇವಕನಲ್ಲವೇ. [PE]

Notes

No Verse Added

Total 150 Chapters, Current Chapter 143 of Total Chapters 150
ಕೀರ್ತನೆಗಳು 143:22
1. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು;
ನನ್ನ ಬಿನ್ನಹಕ್ಕೆ ಕಿವಿಗೊಡು;
ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
2. ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ;
ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
3. ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ;
ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ.
ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ;
ಬಹು ಕಾಲದಿಂದ ಸತ್ತವರಂತಿದ್ದೇನೆ.
4. ನನ್ನ ಆತ್ಮವು ಕುಂದಿಹೋಗಿದೆ;
ನನ್ನ ಮನಸ್ಸು ಬೆರಗಾಗಿದೆ.
5. ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ;
ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ;
ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;
6. ಕೈಚಾಚಿ ಬೇಡುತ್ತೇನೆ;
ಒಣನೆಲವು ನೀರಿಗಾಗಿ ಹೇಗೋ,
ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ
7. ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು;
ನನ್ನ ಆತ್ಮವು ಕುಂದಿಹೋಗಿದೆ.
ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
8. ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;
ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.
ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;
ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
9. ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ;
ಶತ್ರುಗಳಿಂದ ನನ್ನನ್ನು ಬಿಡಿಸು.
10. ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು,
ನನ್ನ ದೇವರು ನೀನಲ್ಲವೋ?
ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
11. ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು;
ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.
12. ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು.
ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು;
ನಾನು ನಿನ್ನ ಸೇವಕನಲ್ಲವೇ. PE
Total 150 Chapters, Current Chapter 143 of Total Chapters 150
×

Alert

×

kannada Letters Keypad References